ಲಡಾಖ್ ಸಂಘರ್ಷ: ನಾಳೆ 3ನೇ ಬಾರಿ ಭಾರತ-ಚೀನಾ ಕಮಾಂಡರ್ ಮಟ್ಟದ ಮಾತುಕತೆ

ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ - ಚೀನಾ ಸೇನಾ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಈಗಾಗಲೇ ಎರಡು ಬಾರಿ ವಿಫಲವಾಗಿದ್ದು, ಈಗ ಮೂರನೇ ಬಾರಿಗೆ ಮಂಗಳವಾರ ಉಭಯ ದೇಶಗಳ ಕಮಾಂಡರ್ ಮಟ್ಟದ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Published: 29th June 2020 08:05 PM  |   Last Updated: 29th June 2020 08:05 PM   |  A+A-


An army soldier stands guard at Zojila Pass situated at a height of 11 516 feet on the way to frontier region of Ladakh

ಸಾಂದರ್ಭಿಕ ಚಿತ್ರ

Posted By : Lingaraj Badiger
Source : The New Indian Express

ನವದೆಹಲಿ: ಲಡಾಖ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಭಾರತ - ಚೀನಾ ಸೇನಾ ಕೋರ್ ಕಮಾಂಡರ್ ಮಟ್ಟದ ಮಾತುಕತೆ ಈಗಾಗಲೇ ಎರಡು ಬಾರಿ ವಿಫಲವಾಗಿದ್ದು, ಈಗ ಮೂರನೇ ಬಾರಿಗೆ ಮಂಗಳವಾರ ಉಭಯ ದೇಶಗಳ ಕಮಾಂಡರ್ ಮಟ್ಟದ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಎರಡೂ ದೇಶಗಳು ಕೋರ್ ಕಮಾಂಡರ್ ಸಭೆಗೆ ಒಪ್ಪಿಕೊಂಡಿರುವುದು ಉತ್ತಮ ಬೆಳವಣಿಗೆ ಮತ್ತು ಈ ಬಾರಿ ಭಾರತದ ಕಡೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಹಿಂದೆ ನಡೆದ ಎರಡು ಕಮಾಂಡರ್-ಮಟ್ಟದ ಸಭೆಗಳು ಮೊಲ್ಡೊದಲ್ಲಿ ನಡೆದಿದ್ದವು. ಇದು ಚೀನಾ ಕಡೆಯ ವಾಸ್ತವ ನಿಯಂತ್ರಣ ರೇಖೆ(ಎಲ್‌ಎಸಿ)ಯಾಗಿದೆ.

ಭಾರತದ ಪರವಾಗಿ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಮತ್ತು ಚೀನಾ ಪರವಾಗಿ ಮೇಜರ್ ಜನರಲ್ ಲಿಯು ಲಿನ್ ಮಾತುಕತೆಯಲ್ಲಿ ಭಾಗವಹಿಸಲಿದ್ದಾರೆ.

ಲಡಾಖ್ ನ ಗಾಲ್ವಾನ್ ಘಟನೆಯ ಹಿನ್ನೆಲೆಯಲ್ಲಿ ಉದ್ಭವಿಸಿರುವ ಉದ್ವಿಗ್ನತೆ ಶಮನಗೊಳಿಸುವ ಉದ್ದೇಶ ಮಾತುಕತೆ ಹೊಂದಿದೆ.

ಜೂನ್ ೧೫ ರಂದು ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಪಡೆಗಳನ್ನು ಹಿಂತೆಗೆದುಕೊಳ್ಳುವ ಸಂದರ್ಭದಲ್ಲಿ, ಚೈನಾ ನಡೆಸಿದ ದಾಳಿಯಿಂದಾಗಿ ಕರ್ನಲ್ ಸಂತೋಷ್ ಬಾಬು ಸೇರಿದಂತೆ ೨೦ ಭಾರತೀಯ ಯೋಧರು ಹುತಾತ್ಮ ಗೊಂಡಿದ್ದರು. ಭಾರತೀಯ ಯೋಧರು ನಡೆಸಿದ ಪ್ರತಿದಾಳಿಗೆ ಚೀನಾದ ಸೇನೆಯ ಯೋಧರು ಸಹ ಸಾಕಷ್ಟು ಸಂಖ್ಯೆಯಲ್ಲಿ ಮೃತಪಟ್ಟಿದ್ದು, ಆದರೆ, ಈ ಕುರಿತು ಚೀನಾ ಯಾವುದೇ ಹೇಳಿಕೆಯನ್ನುಈವರೆಗೂ ನೀಡಿಲ್ಲ. ಸರ್ವಪಕ್ಷ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಹೆಸರನ್ನು ನೇರವಾಗಿ ಉಲ್ಲೇಖಿಸಿದ್ದಾರೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
'Nationalism', 'citizenship', 'demonetisation' among chapters dropped from CBSE syllabus

ಹಿರಿಯ ತರಗತಿಗಳ ಪಠ್ಯಕ್ರಮವನ್ನು 30% ರಷ್ಟು ಕಡಿಮೆ ಮಾಡುವ ಸಿಬಿಎಸ್‌ಇ ನಡೆ ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp