ಮಹಾರಾಷ್ಟ್ರ: 24 ಗಂಟೆಗಳಲ್ಲಿ 5,493 ಹೊಸ ಕೊರೋನಾ ಪ್ರಕರಣ, 156 ಸೋಂಕಿತರ ಸಾವು!
ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
Published: 29th June 2020 08:38 AM | Last Updated: 29th June 2020 12:31 PM | A+A A-

ಕೊರೊನಾ ಸೋಂಕು
ಮುಂಬೈ: ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.
ಹೌದು.. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,64,626ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 156 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 7,429ಕ್ಕೆ ಏರಿಕೆಯಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಪ್ರಸ್ತುತ 70,607 ಸಕ್ರಿಯ ಪ್ರಕರಣಗಳಿದ್ದು, ಮಹಾರಾಷ್ಟ್ರದಲ್ಲಿ ಈ ವರೆಗೂ ಗುಣಮುಖರಾದವರ ಸಂಖ್ಯೆ 94,019ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ 'ಮಹಾ' ಪೊಲೀಸ್ ತತ್ತರ
ಇನ್ನು ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ಪೊಲೀಸ್ ಇಲಾಖೆ ತತ್ತರಿಸಿ ಹೋಗಿದ್ದು ನಿನ್ನೆ ಮತ್ತೆ 150 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ದೃಢವಾಗಿದೆ. ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಸೋಂಕಿಗೆ ತುತ್ತಾದ ಪೊಲೀಸರ ಸಂಖ್ಯೆ 4666ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಮತ್ತೆ ಓರ್ವ ಸೋಂಕಿತ ಪೊಲೀಸ್ ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.
Maharashtra reports 156 deaths and 5493 new #COVID19 positive cases today. Out of 156 deaths, 60 occurred in the last 48 hours and 96 from the previous period. The total number of cases in the state reaches 1,64,626 including 70,607 active cases: State Health Department pic.twitter.com/tFTyAtaiKQ
— ANI (@ANI) June 28, 2020
In the last 48 hours, 1 death and 150 new #COVID19 positive cases have been reported in Maharashtra Police; the total number of positive cases rises to 4666 and the death toll is at 57: Maharashtra Police pic.twitter.com/T9dI4p4NqK
— ANI (@ANI) June 28, 2020