ಜುಲೈ 15 ರಂದು ಸಿ.ಬಿ.ಎಸ್.ಸಿ 10 ಮತ್ತು 12ನೇ ತರಗತಿ ಫಲಿತಾಂಶ ಪ್ರಕಟ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ-ಸಿಬಿಎಸ್‌ಇಯಲ್ಲಿ ವಿದ್ಯಾರ್ಥಿಗಳ ಈವರೆಗಿನ ತರಗತಿಗಳಲ್ಲಿನ ಸಾಧನೆ ಆಧಾರದ ಮೇಲೆ 10 ಮತ್ತು 12ನೇ ತರಗತಿಗಳ ಮೌಲ್ಯಮಾಪನ ಅಳೆಯುವ ಪ್ರಕ್ರಿಯೆ ಆರಂಭವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ-ಸಿಬಿಎಸ್‌ಇಯಲ್ಲಿ ವಿದ್ಯಾರ್ಥಿಗಳ ಈವರೆಗಿನ ತರಗತಿಗಳಲ್ಲಿನ ಸಾಧನೆ ಆಧಾರದ ಮೇಲೆ 10 ಮತ್ತು 12ನೇ ತರಗತಿಗಳ ಮೌಲ್ಯಮಾಪನ ಅಳೆಯುವ ಪ್ರಕ್ರಿಯೆ ಆರಂಭವಾಗಿದೆ.

ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುತ್ತಿದ್ದು, ಜುಲೈ 15 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಡಾ.ಸನ್ಯಾಂ ಭಾರದ್ವಾಜ್ ತಿಳಿಸಿದ್ದಾರೆ. 

ಸಿಬಿಎಸ್ ಇ ಈಗಾಗಲೇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸಿರುವ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳು ಮತ್ತು ಆಂತರಿಕ ಮೌಲ್ಯಮಾಪನ ಕಾರ್ಯಕ್ಷಮತೆ(internal assessment performance) ಆಧಾರದ ಮೇಲೆ ಮೌಲ್ಯಮಾಪನ ಮಾಡಿ ಫಲಿತಾಂಶ ನೀಡಲಿದೆ ಎಂದು ಈ ಹಿಂದೆ ವಕೀಲರು ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com