ದೇಶಾದ್ಯಂತ ಒಂದೇ ದಿನ 2,10,292 ಕೋವಿಡ್ ಪರೀಕ್ಷೆ, ಜೂನ್ 29ರವರೆಗೆ ಒಟ್ಟಾರೆ 86,08,654 ಸ್ಯಾಂಪಲ್ ಪರೀಕ್ಷೆ

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,31,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,31,095 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ. 

ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,10,292 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜೂನ್ 29ರವರೆಗೂ 86,08,654 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಇನ್ನು ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ 18,522 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. 

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ ಮಹಾಮಾರಿ ವೈರಸ್'ಗೆ 418 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 16,893ಕ್ಕೆ ತಲುಪಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com