ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಳ್ಳಿಹಾಕಿದ ಶಿವಸೇನೆ

ರಾಜ್ಯದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರ ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಿವಸೇನೆ ಭಾನುವಾರ ಹೇಳಿದೆ.
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ರಾಜ್ಯದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರ ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಿವಸೇನೆ ಭಾನುವಾರ ಹೇಳಿದೆ.

"ಮುಸ್ಲಿಮರಿಗೆ ಧರ್ಮ ಆಧಾರಿತ ಮೀಸಲಾತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ಆತಂಕಕಾರಿ. ಶಿವಸೇನೆ ನೇತೃತ್ವದ ಸರ್ಕಾರ ಮುಸ್ಲಿಮರ ಒಲೈಕೆ ಮಾಡಬಾರದು. ಇದು ಹಿಂದೂ ಸಮಾಜದ ನಿರೀಕ್ಷೆ" ಎಂದು ವಿಶ್ವ ಹಿಂದೂ ಪರಿಷತ್ ಟ್ವೀಟ್ ಮಾಡಿತ್ತು. ಬಳಿಕ ಶಿವೇಸನೆ ಮೀಸಲಾತಿ ಪ್ರಸ್ತಾವನೆಯಲ್ಲಿ ತಳ್ಳಿಹಾಕಿದೆ.

ಎರಡು ದಿನಗಳ ಹಿಂದಷ್ಟೇ ಮಹಾರಾಷ್ಟ್ರ ಅಲ್ಪ ಸಂಖ್ಯಾತ ಸಚಿವ ನವಾಬ್ ಮಲಿಕ್ ಅವರು, ಶಿಕ್ಷಣದಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಸಂಬಂಧ ಮಸೂದೆ ಮಂಡಿಸಲಾಗುವುದು ಎಂದು ಹೇಳಿದ್ದರು.

ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲಾತಿ ನೀಡಬಹುದು ಎಂದು ಹೇಳಿದೆ. ಈ ಬಗ್ಗೆ ಹಿಂದಿನ ಸರ್ಕಾರ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಆದರೆ ನಾವು ಹೈಕೋರ್ಟ್ ಆದೇಶವನ್ನು ಶೀಘ್ರದಲ್ಲೇ ಜಾರಿಗೊಳಿಸುವಂತೆ ಎಂದು ಮಲಿಕ್ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com