ಗಲ್ಲು ತಪ್ಪಿಸಿಕೊಳ್ಳುವ ಮತ್ತೊಂದು ಯತ್ನ ವಿಫಲ: ನಿರ್ಭಯಾ ಹತ್ಯಾಚಾರಿಯ ಮತ್ತೊಂದು ಅರ್ಜಿ 'ಸುಪ್ರೀಂ'ನಿಂದ ವಜಾ!

ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳುವ ನಿರ್ಭಯಾ ಅತ್ಯಾಚಾರಿಗಳ ಮತ್ತೊಂದು ಪ್ರಯತ್ನವನ್ನು ಸುಪ್ರೀಂ ಕೋರ್ಟ್ ವಿಫಲಗೊಳಿಸಿದ್ದು, ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಗಲ್ಲು ಶಿಕ್ಷೆ ತಪ್ಪಿಸಿಕೊಳ್ಳುವ ನಿರ್ಭಯಾ ಅತ್ಯಾಚಾರಿಗಳ ಮತ್ತೊಂದು ಪ್ರಯತ್ನವನ್ನು ಸುಪ್ರೀಂ ಕೋರ್ಟ್ ವಿಫಲಗೊಳಿಸಿದ್ದು, ಅಪರಾಧಿ ಪವನ್ ಗುಪ್ತಾ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಈ ಹಿಂದೆ ನ್ಯಾಯಾಲಯ ನೀಡಿದ್ದ ಗಲ್ಲು ಶಿಕ್ಷೆಯಲ್ಲಿ ಲೋಪದೋಷಗಳಿದ್ದು, ನ್ಯಾಯಾಲಯ ಕೆಲ ಪ್ರಮುಖ ಅಂಶಗಳನ್ನು ಪರಿಗಣಿಸದೇ ತೀರ್ಪು ನೀಡಿದೆ. ಹೀಗಾಗಿ ತಮಗೆ ನೀಡಿರುವ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸುವಂತೆ ಆಪರಾದಿ ಪವನ್ ಗುಪ್ತಾ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದ. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಇದೀಗ ಹತ್ಯಾಚಾರಿಗಳ ಗಲ್ಲು ಶಿಕ್ಷೆ ಖಾಯಂ ಆಗಿದೆ.

ಈ ಹಿಂದೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನಂತೆ ಎಲ್ಲವೂ ಅಂದುಕೊಂಡಂತೆ ನಡೆದರೆ ನಾಳೆ ಮುಂಜಾನೆ ನಿರ್ಭಯಾ ಪ್ರಕರಣದ ಎಲ್ಲ ಅಪರಾಧಿಗಳನ್ನು ಗಲ್ಲಿಗೇರಿಸಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com