370ನೇ ವಿಧಿ ರದ್ದು: ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಸುಪ್ರೀಂಕೋರ್ಟ್ ನಕಾರ

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದುಗೊಳಿಸಿದ ಹಾಗೂ ರಾಜ್ಯದ ವಿಭಜನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು 7 ಮಂದಿ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದುಗೊಳಿಸಿದ ಹಾಗೂ ರಾಜ್ಯದ ವಿಭಜನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆಯನ್ನು 7 ಮಂದಿ ನ್ಯಾಯಮೂರ್ತಿಗಳ ವಿಸ್ತೃತ ಪೀಠಕ್ಕೆ ವರ್ಗಾಯಿಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. 

ಪ್ರಕರಣದ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಅಗತ್ಯವಿಲ್ಲ. ವರ್ಗಾವಣೆಗೆ ಯಾವುದೇ ಕಾರಣಗಲೂ ಇಲ್ಲ ಎಂದು ಪೀಠ ಹೇಳಿದೆ. 

ನ್ಯಾಯಮೂರ್ತಿಗಳಾದ ಎನ್.ವಿ.ರಮಣ, ಸಂಜಯ್ ಕೃಷ್ಣ ಕೌಲ್, ಆರ್. ಸುಭಾಷ್ ರೆಡ್ಡಿ, ಬಿ.ಆರ್. ಗವಾಯ್ ಹಾಗೂ ಸೂರ್ಯಕಾಂತ್ ಅವರನ್ನೊಳಗೊಡ ಪೀಠವು ಕಳೆದ ಜ.23ರಂದು ವಿಚಾರಣೆ ಪೂರ್ಣಗೊಳಿಸಿದ್ದು, ತೀರ್ಪನ್ನು ಇಂದು ಪ್ರಕಟಿಸಿದೆ. 

ಸರ್ಕಾರದ ಪರವಾಗಿ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ಇತರ ಕೆಲವು ಹಿರಿಯ ವಕೀಲರು, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ಒಪ್ಪಿಸುವುದಕ್ಕೆ ವಿರೇಧ ವ್ಯಕ್ತಪಡಿಸಿದರು. ಆದರೆ, ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ವಕೀಲರ ಸಂಘ ಹಾಗೂ ಕೆಲವು ವಕೀಲಸು ವಿಸ್ತೃತ ಪೀಠಕ್ಕೆ ಒಪ್ಪಿಸಬೇಕೆಂದು ಒತ್ತಾಯಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com