ಸಾಮಾಜಿಕ ಮಾಧ್ಯಮ ಬಳಸದಿರಲು ಪ್ರಧಾನಿ ಮೋದಿ ಚಿಂತನೆ, ಮೊದಲು 'ದ್ವೇಷ ಬಿಡಿ' ಎಂದ ರಾಹುಲ್

ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತ್ಯಜಿಸಲು ಯೋಚಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಚ್ಚರಿಯ ಟ್ವೀಟ್ ಮಾಡಿದ್ದಾರೆ.
ನರೇಂದ್ರ ಮೋದಿ-ರಾಹುಲ್ ಗಾಂಧಿ
ನರೇಂದ್ರ ಮೋದಿ-ರಾಹುಲ್ ಗಾಂಧಿ

ನವದೆಹಲಿ: ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತ್ಯಜಿಸಲು ಯೋಚಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಚ್ಚರಿಯ ಟ್ವೀಟ್ ಮಾಡಿದ್ದಾರೆ.

‘ಈ ಭಾನುವಾರ, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಂತಹ ಸಾಮಾಜಿಕ ಮಾಧ್ಯಮ ಖಾತೆಗಳಿಂದ ನಿರ್ಗಮಿಸುವ ಬಗ್ಗೆ ಯೋಚಿಸುತ್ತಿದ್ದೇನೆ.’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಆದರೆ ವಿಲ್​ ಕೀಪ್​ ಯು ಆಲ್​ ಪೋಸ್ಟೆಡ್​ ಎಂಬ ಕೊನೇ ವಾಕ್ಯದ ಅರ್ಥ ಏನಿರಬಹುದು ಎಂದು ನಿಖರವಾಗಿ ಹೇಳಲು ಸಾಧ್ಯವಾಗುತ್ತಿಲ್ಲ.

ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮಗಳಲ್ಲಿ ತುಂಬ ಸಕ್ರಿಯರಾಗಿದ್ದು, ಇನ್ಸ್​ಸ್ಟಾಗ್ರಾಂನಲ್ಲಿ 30 ಮಿಲಿಯನ್ ಫಾಲೋವರ್ಸ್ ದಾಟಿದ ಜಾಗತಿಕ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮೋದಿ ಟ್ವಿಟರ್​​​ನಲ್ಲಿ 50 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಈ ಅಚ್ಚರಿಯ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ನೀವು ತ್ಯಜಿಸಬೇಕಿರುವದು ಸಾಮಾಜಿಕ ಮಾಧ್ಯಮ ಖಾತೆಗಳನ್ನಲ್ಲ. ನಿಮ್ಮಲ್ಲಿರುವ ದ್ವೇಷವನ್ನು ತ್ಯಜಿಸಿ ಎಂದು ಟಾಂಗ್ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com