ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ 'ಈ ವ್ಯಕ್ತಿಗಳಿಗೆ' ದೇಶ ಬಿಡುವಂತೆ ಸರ್ಕಾರದ ಸೂಚನೆ!
ದೇಶ
ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾದ 'ಈ ವ್ಯಕ್ತಿಗಳಿಗೆ' ದೇಶ ಬಿಡುವಂತೆ ಸರ್ಕಾರದ ಸೂಚನೆ!
ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ನವದೆಹಲಿ: ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿ ನಿಯಮಗಳ ಉಲ್ಲಂಘನೆ ಮಾಡಿದವರ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ಲೋಕಸಭೆಯಲ್ಲಿ ಈ ಕುರಿತು ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಸಿಎಎ ವಿರೋಧಿ ಪ್ರತಿಭಟನೆಯಲ್ಲಿ 5 ವಿದೇಶಿಗಳು ಭಾಗಿಯಾಗಿದ್ದರು. ಈ ಮೂಲಕ ಅವರು ವೀಸಾ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ. ಆದ್ದರಿಂದ ಅವರನ್ನು ದೇಶ ಬಿಡುವಂತೆ ಸೂಚನೆ ನೀಡಲಾಗುವುದು ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ್ದಾರೆ.

