ಭಾರತಕ್ಕೂ ತಟ್ಟಿದ ಕೊರೋನಾವೈರಸ್ ಭೀತಿ: ದೇಶದ ಆರೋಗ್ಯ ತಪಾಸಣಾ ವ್ಯವಸ್ಥೆ ಮೇಲೆ ತಜ್ಞರ ಸಂಶಯ

ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಈ ವರೆಗೂ 3000ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದುಕೊಂಡಿದೆ. ಇದೀಗ ಈ ವೈರಸ್ ಭಾರತದಲ್ಲೂ ಭೀತಿ ಹುಟ್ಟಿಸಿದ್ದು, ಮೂರು ಪ್ರಕರಣಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ದೇಶದ ಆರೋಗ್ಯ ತಪಾಸಣಾ ವ್ಯವಸ್ಥೆ ಮೇಲೆ ತಜ್ಞರು ಸಂಶಯ ಪಡಲು ಆರಂಭಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಚೀನಾದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್ ಈ ವರೆಗೂ 3000ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದುಕೊಂಡಿದೆ. ಇದೀಗ ಈ ವೈರಸ್ ಭಾರತದಲ್ಲೂ ಭೀತಿ ಹುಟ್ಟಿಸಿದ್ದು, ಮೂರು ಪ್ರಕರಣಗಳು ದೃಢಪಟ್ಟಿವೆ. ಈ ಹಿನ್ನೆಲೆಯಲ್ಲಿ ದೇಶದ ಆರೋಗ್ಯ ತಪಾಸಣಾ ವ್ಯವಸ್ಥೆ ಮೇಲೆ ತಜ್ಞರು ಸಂಶಯ ಪಡಲು ಆರಂಭಿಸಿದ್ದಾರೆ. 

ವೈರಸ್ ಪೀಡಿತ ರಾಷ್ಟ್ರಗಳಿಂದ ಬರುವ ಪ್ರವಾಸಿಗರು ಹಾಗೂ ರಾಷ್ಟ್ರದ ಪ್ರಜೆಗಳ ಮೇಲೆ ತೀವ್ರ ನಿಗಾಇರಿಸಿರುವುದಾಗಿ ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೂ ದೇಶದಲ್ಲಿ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ತಜ್ಞರು ತಪಾಸಣಾ ವ್ಯವಸ್ಥೆ ಮೇಲೆ ಸಂಶಯಪಡುವಂತಾಗಿದೆ. 

ನಿನ್ನೆಯಷ್ಟೇ ಹೇಳಿಕೆ ನೀಡಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು, ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ತೆಲಂಗಾಣ ರಾಜ್ಯದಲ್ಲಿ ಇಬ್ಬರು ರೋಗಿಗಳಲ್ಲಿ ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ ಎಂದು ಹೇಳಿದ್ದರು. ಇಟಲಿಯಿಂದ ಬಂದಿದ್ದ ದೆಹಲಿ ನಾಗರೀಕನಲ್ಲಿ ವೈರಸ್ ಪತ್ತೆಯಾಗಿದೆ. ಇನ್ನು ದುಬೈನಿಂದ ತೆಲಂಗಾಣಕ್ಕೆ ವಾಪಸ್ಸಾಗಿದ್ದ ವ್ಯಕ್ತಿಯಲ್ಲಿಯೂ ವೈರಸ್ ಪತ್ತೆಯಾಗಿದ್ದು, ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದರು. ಈ ಹಿಂದೆ ಕೇರಳ ರಾಜ್ಯದಲ್ಲಿ ಮೂರು ಪ್ರಕರಣಗಳು ಪತ್ತೆಯಾಗಿದ್ದವು. 

ಪ್ರಸ್ತುತ ವಿಶ್ವದ 12 ರಾಷ್ಟ್ರಗಳಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳು ಹಾಗೂ ಕರಾವಳಿ ತೀರ ಪ್ರದೇಶಗಳಲ್ಲಿಯೇ ತಪಾಸಣೆ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ವೈಜ್ಞಾನಿಕ ಮೌಲ್ಯಪಾಮನದ ಆದರಾತ ಮೇಲೆ ಮುಂದಿನ ದಿನಗಳಲ್ಲಿ ಮತ್ತಷ್ಟು ದೇಶಗಳ ಪ್ರಯಾಣಿಕರನ್ನು ತಪಾಸಣೆ ನಡೆಸಬಹುದು ಎಂದಿದ್ದಾರೆ. ಆದರೆ, ಆರೋಗ್ಯ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿರುವ ಪ್ರಕಾರ, ವೈರಸ್ ಹೆಚ್ಚೆಚ್ಚು ಹರಡಿದರೆ, ಅವುಗಳ ಹೆಜ್ಜೆಗುರುತು ಪತ್ತೆಹಚ್ಚಲು ಭಾರತಕ್ಕೆ ಕಠಿಣವಾಗಬಹುದು ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com