ಗೋಮೂತ್ರ, ಹಸುವಿನ ಸಗಣಿಯಿಂದ ಕೊರೋನಾ ವೈರಸ್ ಗುಣಪಡಿಸಬಹುದು: ಅಸ್ಸಾಂ ಬಿಜೆಪಿ ಶಾಸಕಿ 

ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ ಜಗತ್ತೇ ಪ್ರಯತ್ನಿಸುತ್ತಿದ್ದರೆ ಅಸ್ಸಾಂನ ಬಿಜೆಪಿ ಶಾಸಕಿಯೊಬ್ಬರು ಗೋಮೂತ್ರ ಮತ್ತು ಸೆಗಣಿಯಿಂದ ಪರಿಹರಿಸಬಹುದು ಎಂದು ಹೇಳಿ ಸುದ್ದಿಯಾಗಿದ್ದಾರೆ. 

Published: 03rd March 2020 10:13 AM  |   Last Updated: 04th March 2020 03:48 PM   |  A+A-


Posted By : Sumana Upadhyaya
Source : PTI

ಗುವಾಹಟಿ: ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ ಜಗತ್ತೇ ಪ್ರಯತ್ನಿಸುತ್ತಿದ್ದರೆ ಅಸ್ಸಾಂನ ಬಿಜೆಪಿ ಶಾಸಕಿಯೊಬ್ಬರು ಗೋಮೂತ್ರ ಮತ್ತು ಹಸುವಿನ ಸಗಣಿಯಿಂದ ಪರಿಹರಿಸಬಹುದು ಎಂದು ಹೇಳಿ ಸುದ್ದಿಯಾಗಿದ್ದಾರೆ. 


ಅಸ್ಸಾಂ ವಿಧಾನಸಭೆಯಲ್ಲಿ ನಿನ್ನೆ ಬಾಂಗ್ಲಾದೇಶಕ್ಕೆ ಗೋವುಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ ಎಂಬ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿದ್ದ ವೇಳೆ ಬಿಜೆಪಿ ಶಾಸಕಿ ಸುಮನ್ ಹರಿಪ್ರಿಯಾ ಈ ಸಲಹೆ ಕೊಟ್ಟು ಇಡೀ ಸದನವನ್ನು ನಗೆಗಡಲಲ್ಲಿ ತೇಲಿಸಿದರು.  ''ನಮಗೆಲ್ಲಾ ಗೊತ್ತು, ಸೆಗಣಿ ಅತ್ಯಂತ ಉಪಕಾರಿ. ಅದೇ ರೀತಿ ಗೋಮೂತ್ರವನ್ನು ಸಿಂಪಡಿಸಿದರೆ ಅದು ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛಗೊಳಿಸುತ್ತದೆ. ಇಷ್ಟು ಮಹತ್ವದ ಸೆಗಣಿ ಮತ್ತು ಗೋಮೂತ್ರವನ್ನು ಕೊರೊನಾ ವೈರಸ್ ಸೋಂಕನ್ನು ಗುಣಪಡಿಸಲು ಬಳಸಬಹುದು ಎಂಬುದು ನನ್ನ ಅಭಿಪ್ರಾಯ'' ಎಂದರು.


ಗೋವು ನಮಗೆ ಒಂದು ಸ್ವತ್ತಾಗಿದ್ದು ಇದರಿಂದ ಕ್ಯಾನ್ಸರ್ ನಂತಹ ಮಾರಕ ರೋಗವನ್ನು ಕೂಡ ಗುಣಪಡಿಸಬಹುದು. ಗುಜರಾತ್ ನ ಆಯುರ್ವೇದ ಆಸ್ಪತ್ರೆಯೊಂದರಲ್ಲಿ ಕ್ಯಾನ್ಸರ್ ರೋಗಿಗಳನ್ನು ಗೋವುಗಳ ಜೊತೆ ಇರಲು ಬಿಡುತ್ತಾರೆ. ಸೆಗಣಿಯನ್ನು ಕ್ಯಾನ್ಸರ್ ರೋಗಿಗಳ ದೇಹಕ್ಕೆ ಹಚ್ಚುತ್ತಾರೆ. ಗೋಮೂತ್ರದಿಂದ ತಯಾರಿಸಿದ ಪಂಚಾಮೃತವನ್ನು ಅವರಿಗೆ ಕುಡಿಯಲು ಕೊಡುತ್ತಾರೆ ಎಂದು ಕೂಡ ಶಾಸಕಿ ಹೇಳಿದರು.


ಚೀನಾದ ವುಹಾನ್ ಪ್ರಾಂತ್ಯದಲ್ಲಿ ಮೊದಲಿಗೆ ಕಾಣಿಸಿಕೊಂಡ ಕೊರೋನಾ ವೈರಸ್ ಇಂದು 50ಕ್ಕೂ ಹೆಚ್ಚು ದೇಶಗಳಿಗೆ ಹಬ್ಬಿವೆ. ಇದೊಂದು ಜಾಗತಿಕ ತುರ್ತು ಆರೋಗ್ಯ ಸೇವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. ಇದುವರೆಗೆ 3 ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 90 ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 


ಭಾರತದಲ್ಲಿ ದೆಹಲಿ, ತೆಲಂಗಾಣ ಮತ್ತು ಜೈಪುರದಲ್ಲಿ ಕೊರೊನಾ ವೈರಸ್ ವರದಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ದೃಢಪಡಿಸಿದೆ.


Stay up to date on all the latest ರಾಷ್ಟ್ರೀಯ news
Poll
Yediyurappa

ಕರ್ನಾಟಕ ಸಿಎಂ ಆಗಿ ಬಿ.ಎಸ್. ಯಡಿಯೂರಪ್ಪ ನಿರ್ಗಮನವು ರಾಜ್ಯದಲ್ಲಿ ಬಿಜೆಪಿಯ ಚುನಾವಣಾ ಭವಿಷ್ಯದ ಮೇಲೆ ಪರಿಣಾಮ ಬೀರುತ್ತದೆಯೇ?


Result
ಹೌದು
ಇಲ್ಲ
flipboard facebook twitter whatsapp