ಜೈಪುರದಲ್ಲಿ ಇಟಲಿ ಪ್ರವಾಸಿಗನ ಪತ್ನಿಗೂ ಕೊರೋನಾ ವೈರಸ್ ಪಾಸಿಟಿವ್, ದೇಶದಲ್ಲಿ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆ

ಜೈಪುರದಲ್ಲಿ ಇಟಲಿಯ ಪ್ರವಾಸಿಗರೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿತ್ತು. ಈಗ ಆತನ ಪತ್ನಿಯಲ್ಲೂ ಮಾರಣಾಂತಿಕ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೊರೋನಾ ವೈರಸ್...

Published: 03rd March 2020 11:32 PM  |   Last Updated: 03rd March 2020 11:32 PM   |  A+A-


Police_security

ಆಸ್ಪತ್ರೆ ಮುಂಭಾಗ ಪೊಲೀಸರು

Posted By : Lingaraj Badiger
Source : PTI

ನವದೆಹಲಿ: ಜೈಪುರದಲ್ಲಿ ಇಟಲಿಯ ಪ್ರವಾಸಿಗರೊಬ್ಬರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿತ್ತು. ಈಗ ಆತನ ಪತ್ನಿಯಲ್ಲೂ ಮಾರಣಾಂತಿಕ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ಭಾರತದಲ್ಲಿ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. 

ಕೊರೋನಾ ವೈರಸ್ ನಿಂದ ಬಳಲುತ್ತಿರುವ ಇಟಲಿ ವ್ಯಕ್ತಿಯ ಪತ್ನಿಯನ್ನು ತಪಾಸಣೆಗೆ ಒಳಪಡಿಸಿದಾಗ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಮತ್ತೊಂದು ಪರೀಕ್ಷೆಗಾಗಿ ಆಕೆಯ ರಕ್ತದ ಮಾದರಿಯನ್ನು ಪುಣೆಯ ನ್ಯಾಷಿನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ(ಎನ್ಐವಿ)ಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಇಟಲಿ ಪ್ರವಾಸಿಗನ ಪತ್ನಿಯಲ್ಲೂ ಕೊರೋನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಮತ್ತೊಮ್ಮೆ ಖಚಿತಪಡಿಸಿಕೊಳ್ಳುವುದಕ್ಕಾಗಿ ಆಕೆಯ ರಕ್ತದ ಮಾದರಿಯನ್ನು ಪುಣೆಯ ಎನ್ ಐವಿ ಗೆ ಕಳುಹಿಸಲಾಗಿದೆ. ಎರಡನೇ ಪರೀಕ್ಷೆಯಲ್ಲೂ ಪಾಸಿಟಿವ್ ಬಂದರೆ ಕೊರೋನಾ ಪ್ರಕರಣಗಳ ಸಂಖ್ಯೆ ಏಳಕ್ಕೆ ಏರಿಕೆಯಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಟಲಿ ಪ್ರವಾಸಿಗನಿಂದ ಸಂಗ್ರಹಿಸಲಾದ ಮಾದರಿಯನ್ನು ಶನಿವಾರ ಮೊದಲ ಬಾರಿಗೆ ಪರೀಕ್ಷೆ ನಡೆಸಿದಾಗ ನಗೆಟಿವ್ ಕಂಡುಬಂದಿತ್ತು. ಆದರೆ, ಆತನ ಸ್ಥಿತಿ ಕ್ಷೀಣಿಸಿದ್ದರಿಂದ ಸೋಮವಾರ ಮತ್ತೆ ಎರಡನೇ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿದಾಗ ಪಾಸಿಟಿವ್ ಕಂಡುಬಂದಿದೆ.

ಸೋಮವಾರ ದೆಹಲಿ ಹಾಗೂ ಹೈದ್ರಾಬಾದ್ ನಲ್ಲಿ ಎರಡು ಹೊಸ ಪ್ರಕರಣಗಳು ಪತ್ತೆಯಾಗಿತ್ತು. ವಿಶ್ವದಾದ್ಯಂತ ಸುಮಾರು 3, 100 ಜನರ ಸಾವಿಗೆ ಕಾರಣವಾಗಿರುವ ಕೊರೋನಾ ವೈರಸ್ ಸೋಂಕು ಹರಡದಂತೆ  ಸರ್ಕಾರ ಎಲ್ಲಾ ಪ್ರಯತ್ನಗಳನ್ನು ನಡೆಸುತ್ತಿದೆ.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp