ಮುಸ್ಲಿಂ ಮೀಸಲಾತಿ ಸಂಬಂಧ ಕಾಂಗ್ರೆಸ್, ಎನ್ ಸಿಪಿ ಸರ್ಕಾರದಿಂದ ಹೊರನಡೆದರೆ, ಸೇನಾಗೆ ಬೆಂಬಲ: ಬಿಜೆಪಿ

ಒಂದು ವೇಳೆ ಮುಸ್ಲಿಂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರ್ಕಾರದಿಂದ ಹೊರ ನಡೆದರೆ ಶಿವಸೇನಾ ನೇತೃತ್ವದ ಸರ್ಕಾರಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಒಂದು ವೇಳೆ ಮುಸ್ಲಿಂ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಎನ್ ಸಿಪಿ ಮೈತ್ರಿ ಸರ್ಕಾರದಿಂದ ಹೊರ ನಡೆದರೆ ಶಿವಸೇನಾ ನೇತೃತ್ವದ ಸರ್ಕಾರಕ್ಕೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಬಿಜೆಪಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಮಹಾ ಅಘಾಡಿ ಸರ್ಕಾರ ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ. 5 ರಷ್ಟು ಮೀಸಲಾತಿ ನೀಡಲಿದೆ ಎಂದು ಕಾಂಗ್ರೆಸ್ ಮತ್ತು ಎನ್ ಸಿಪಿ ಹೇಳುತ್ತಿವೆ. ಆದರೆ ಶಿವಸೇನಾ ನಾಯಕರು ಮಾತ್ರ ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎನ್ನುತ್ತಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಮುಸ್ಲಿಂ ಮೀಸಲಾತಿ ಪ್ರಸ್ತಾವನೆ ಇನ್ನು ನನ್ನ ಬಳಿಗೆ ಬಂದಿಲ್ಲ. ನನ್ನ ಬಳಿಗೆ ಬಂದಾಗ ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ.

ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದಿರುವ ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ್ ಅವರು, ಈ ಸಂಬಂಧ ಸರ್ಕಾರದ ಮೇಲೆ ಒತ್ತಡ ಹೇರುವ ತಂತ್ರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದಿಂದ ಹೊರನಡೆದರೆ ಶಿವಸೇನಾಗೆ ಬಿಜೆಪಿ ಬೆಂಬಲ ನೀಡಲಿದೆ ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com