ಕಮಲ ನಾಥ್
ಕಮಲ ನಾಥ್

ಮಧ್ಯ ಪ್ರದೇಶದಲ್ಲಿ ಕರ್ನಾಟಕ ಮಾದರಿ ಆಪರೇಷನ್; 8 ಶಾಸಕರು ಐಷಾರಾಮಿ ಹೋಟೆಲ್ ಗೆ ಶಿಫ್ಟ್?

ಕರ್ನಾಟಕದಲ್ಲಿ ನಡೆದ ಆಪರೇಷನ್ ಕಮಲ ಮಾದರಿಯಲ್ಲಿ ತಡರಾತ್ರಿ ಮಧ್ಯಪ್ರದೇಶದಲ್ಲಿ ಆಪರೇಷನ್ ಆರಂಭಗೊಂಡಿದ್ದು 12 ಮಂದಿ ಶಾಸರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ 8 ಮಂದಿ ಶಾಸಕರು ದೆಹಲಿಗೆ ಶಿಫ್ಟ್ ಆಗಿದ್ದಾರೆ. 

ಭೂಪಾಲ್: ಕರ್ನಾಟಕದಲ್ಲಿ ನಡೆದ ಆಪರೇಷನ್ ಕಮಲ ಮಾದರಿಯಲ್ಲಿ ತಡರಾತ್ರಿ ಮಧ್ಯಪ್ರದೇಶದಲ್ಲಿ ಆಪರೇಷನ್ ಆರಂಭಗೊಂಡಿದ್ದು 12 ಮಂದಿ ಶಾಸರನ್ನು ಸೆಳೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ 8 ಮಂದಿ ಶಾಸಕರು ದೆಹಲಿಗೆ ಶಿಫ್ಟ್ ಆಗಿದ್ದಾರೆ. 

ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 15 ತಿಂಗಳು ಕಳೆದಿವೆ. ಈ ಸರ್ಕಾರ ಅಸ್ತಿತ್ವಕ್ಕೆ ಬರುವ ಸಂದರ್ಭದಲ್ಲೂ ರೆಸಾರ್ಟ್​ ರಾಜಕಾರಣ ನಡೆದಿತ್ತು. ಆದರೆ, ಇತರೆ ಪಕ್ಷಗಳ ಅಭ್ಯರ್ಥಿಗಳ ಸಹಕಾರದಿಂದ ಬಹುಮತ ಪಡೆದು ಕಮಲನಾಥ್​ ಸಿಎಂ ಗದ್ದುಗೆಗೆ ಏರಿದ್ದರು. 

ಈಗ ಮತ್ತೆ ಅದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾಂಗ್ರೆಸ್ ಪಕ್ಷದ ನಾಲ್ವರು ಶಾಸಕರು ಗುರುಗಾಂವ್​ನಲ್ಲಿರುವ ಸ್ಟಾರ್​ ಹೋಟೆಲ್​ ಸೇರಿಕೊಂಡಿದ್ದಾರೆ. ರಾತ್ರೋರಾತ್ರಿ ನಡೆದ ಈ ಬೆಳವಣಿಗೆಯಿಂದ ಕಮಲನಾಥ್​ ಸರ್ಕಾರಕ್ಕೆ ಆತಂಕಕ್ಕೆ ಒಳಗಾಗಿದೆ.

ಕಾಂಗ್ರೆಸ್​ನ ನಾಲ್ವರು ಶಾಸಕರು ಸ್ಟಾರ್ ಹೋಟೆಲ್ ಪಾಲಾಗಿರುವುದು ನಿಜ. ಈ ವಿಷಯ ತಿಳಿಯುತ್ತಿದ್ದಂತೆ ಸಚಿವರಾದ ಜಿತು ಪತ್ವಾರಿ ಮತ್ತು ಜೈವರ್ಧನ್ ಸಿಂಗ್ ಆ ಹೋಟೆಲ್ ಬಳಿ ಹೋಗಿದ್ದರು. ಆ ನಾಲ್ವರು ಶಾಸಕರ ಮನವೊಲಿಸಲು ಪ್ರಯತ್ನಿಸಿದ ಸಚಿವರು ರಮಾಬಾಯಿ ಅವರನ್ನು ವಾಪಾಸ್​ ಕರೆತಂದಿದ್ದಾರೆ. ಆ ವೇಳೆ ಬಿಜೆಪಿಯವರು ಅವರನ್ನು ತಡೆಯಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ ಎಂದು ಕಾಂಗ್ರೆಸ್ ನಾಯಕ ದಿಗ್ವಜಯ ಸಿಂಗ್ ಆರೋಪಿಸಿದ್ದಾರೆ. 

ಜೆಪಿಯ ರಾಂಪಾಲ್ ಸಿಂಗ್, ನರೋತ್ತಮ್ ಮಿಶ್ರಾ, ಅರವಿಂದ ಬದೌರಿಯಾ ಮತ್ತು ಸಂಜಯ್ ಪಾಠಕ್ ಶಾಸಕರಿಗೆ ಹಣ ನೀಡಿದ್ದಾರೆ. ಈ ಎಲ್ಲ ಶಾಸಕರು ಕಾಂಗ್ರೆಸ್ಸಿಗೆ ಮರಳಲಿದ್ದಾರೆ ಎಂದು ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಮುಖ್ಯಮಂತ್ರಿ ಕಮಲನಾಥ್ ಪ್ರತಿಕ್ರಿಯಿಸಿ, ನಮ್ಮ ಸರ್ಕಾರಕ್ಕೆ ಏನು ಆಗುವುದಿಲ್ಲ. ಎಲ್ಲ ಶಾಸಕರು ವಾಪಸ್ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com