ದೆಹಲಿ ಹಿಂಸಾಚಾರ: ಸಂತ್ರಸ್ತರಿಗೆ ಆಪ್ ನೀಡಿದ ಪರಿಹಾರದಲ್ಲಿ ಯಾವುದೇ ದೋಷವಿಲ್ಲ; 'ಹೈ' ಆದೇಶ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟವರಿಗೆ ಆಮ್ ಆದ್ಮಿ ಸರ್ಕಾರ ನೀಡಿರುವ ಪರಿಹಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ವೇಳೆ ಮೃತಪಟ್ಟವರಿಗೆ ಆಮ್ ಆದ್ಮಿ ಸರ್ಕಾರ ನೀಡಿರುವ ಪರಿಹಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದ್ದು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ತಿರಸ್ಕರಿಸಿದೆ. 

ದೆಹಲಿ ಹಿಂಸಾಚಾರದ ವೇಳೆ ಮೃತಪಟ್ಟವರಿಗೆ ಆಪ್ ಸರ್ಕಾರ ಪರಿಹಾರ ನೀಡಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಅರ್ಜಿಯೊಂದು ದಾಖಲಾಗಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿರುವ ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಮತ್ತು  ನ್ಯಾಯಮೂರ್ತಿ ಸಿ ಹರಿ ಸಂಕರ್ ಅವರಿದ್ದ ಪೀಠ, ಇದೊಂದು ನೀತಿಯುತ ನಿರ್ಧಾರ. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. 

ಯಾವುದೇ ದೋಷವಿಲ್ಲದ ಆಧಾರದ ಮೇಲೆ ಪರಿಹಾರವನ್ನು ನೀಡಲಾಗಿದೆ. ಇದರಲ್ಲಿ ಯಾವುದೇ ದೋಷಗಳೂ ಇಲ್ಲ ಎಂದಿರುವ ನ್ಯಾಯಾಯಲಯ ಕೇವಲ ಗಲಭೆಯಲ್ಲಿ ಮೃತಪಟ್ಟ ಸಂತ್ರಸ್ತರಿಗೆ ಮಾತ್ರ ಪರಿಹಾರ ದೊರೆಯುವಂತೆ ಮಾಡಲು ದೆಹಲಿ ಸರ್ಕಾರಕ್ಕೆ ಸೂಚಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com