ಕೊರೋನಾ ವೈರಸ್ ಭೀತಿ: ಮಾ. 31ರವರೆಗೆ ದೆಹಲಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ

ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ಭಾರತದಲ್ಲೂ ಕಾಣಿಸಿಕೊಂಡ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯ ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಇದೇ ತಿಂಗಳ 31ರವರೆಗೂ ರಜೆಯನ್ನು ಘೋಷಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ಭಾರತದಲ್ಲೂ ಕಾಣಿಸಿಕೊಂಡ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯ ಸರ್ಕಾರಿ ಹಾಗೂ ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಇದೇ ತಿಂಗಳ 31ರವರೆಗೂ ರಜೆಯನ್ನು ಘೋಷಿಸಲಾಗಿದೆ.

ಮುಂಜಾಗ್ರತಾ ಕ್ರಮವಾಗಿ ಐದನೇ ತರಗತಿಯವರೆಗಿನ  ಎಲ್ಲಾ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ.

ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಇರಾನ್  ಶಾಲೆಗಳು ಹಾಗೂ ವಿಶ್ವವಿದ್ಯಾಲಯಗಳಿಗೆ ಒಂದು ತಿಂಗಳ ಕಾಲ ರಜೆ ಘೋಷಿಸಿರುವಂತೆ, ದೆಹಲಿ ಸರ್ಕಾರವೂ ಈ ಕ್ರಮಕ್ಕೆ ಮುಂದಾಗಿದೆ. 

ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಯಲ್ಲಿ  ಬಯೋಮೆಟ್ರಿಕ್ ಹಾಜರಾತಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಚೀನಾದಿಂದ ಹಡಗಿನ ಮೂಲಕ ಬರುತ್ತಿರುವ 452 ಸಿಬ್ಬಂದಿ ಸೇರಿದಂತೆ 16 ಸಾವಿರದ 076 ಪ್ರಯಾಣಿಕರಿಗೆ ಭಾರತದ ಬಂದರಿನಲ್ಲಿ ಇಳಿಯಲು ಅವಕಾಶ ನೀಡುವುದಿಲ್ಲ ಎಂದು ಭಾರತ ಘೋಷಿಸಿದೆ.  ಹಡಗಿನ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ಪ್ರಕಾರ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com