ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 53ಕ್ಕೆ ಏರಿಕೆ, 654 ಕೇಸ್ ದಾಖಲು, 1820 ಮಂದಿಯ ಬಂಧನ

ಇತ್ತೀಚಿಗೆ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 654 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1820 ಮಂದಿಯನ್ನು ಬಂಧಿಸಲಾಗಿದೆ.
ದೆಹಲಿ ಹಿಂಸಾಚಾರ
ದೆಹಲಿ ಹಿಂಸಾಚಾರ

ನವದೆಹಲಿ: ಇತ್ತೀಚಿಗೆ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಒಟ್ಟು 654 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1820 ಮಂದಿಯನ್ನು ಬಂಧಿಸಲಾಗಿದೆ.

654 ಪ್ರಕರಣಗಳ ಪೈಕಿ 47 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಗೆ ಸಂಬಂಧಿಸದ್ದಾಗಿವೆ ಎಂದು ದೆಹಲಿ ಪೊಲೀಸರು ಇಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಮುಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 1,820 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಧ್ಯೆ, ದೆಹಲಿ ಹೈಕೋರ್ಟ್, ಸರ್ಕಾರಿ ಆಸ್ಪತ್ರೆಯಲ್ಲಿರುವ ಅಪರಿಚಿತ ಮೃತ ದೇಹಗಳ ವಿವರ ಪ್ರಕಟಿಸುವಂತೆ ಪೊಲೀಸರಿಗೆ ಸೂಚಿಸಿದೆ.

ನಿನ್ನೆಯಷ್ಟೇ ಹಿಂಸಾಚಾರದಲ್ಲಿ ಒಟ್ಟು 79 ಮನೆಗಳು ಹಾಗೂ 327 ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಅವರು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com