ಲೋಕಸಭೆಯಲ್ಲಿ ಅಶಿಸ್ತಿನ ವರ್ತನೆ, ಕಲಾಪದ ವೇಳೆ ಗದ್ದಲ; 7 ಕಾಂಗ್ರೆಸ್​ ಸಂಸದರ ಅಮಾನತು

ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.
ಲೋಕಸಭೆಯಲ್ಲಿ ಗದ್ದಲ
ಲೋಕಸಭೆಯಲ್ಲಿ ಗದ್ದಲ

ನವದೆಹಲಿ: ದೆಹಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿ, ಅಶಿಸ್ತಿನ ವರ್ತನೆ ತೋರಿದ ಕಾರಣದಿಂದಾಗಿ ಕಾಂಗ್ರೆಸ್ 7 ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಿದ್ದಾರೆ.

ಕಾಂಗ್ರೆಸ್ ನ ಸಂಸದರಾದ ಗೌರವ್​ ಗೊಗೊಯಿ, ಟಿ.ಎನ್​.ಪ್ರತಾಪನ್​, ಮಾಣಿಕಂ ಟಾಗೋರ್​, ಗುರ್ಜೀತ್​ ಸಿಂಗ್​ ಔಜಲಾ, ಬೆನ್ನಿ ಬೆಹಾನನ್, ರಾಜಮೋಹನ್ ಉನ್ನಿತಾನ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ. ಸತತ ಎಚ್ಚರಿಕೆ ಹೊರತಾಗಿಯೂ ಸದನದಲ್ಲಿ ಅಶಿಸ್ತಿನಿಂದ ವರ್ತನೆ ತೋರಿದ ಕಾರಣ 7 ಸಂಸದರನ್ನು ಬಾಕಿ ಉಳಿದಿರುವ ಕಲಾಪದಿಂದ ಅಮಾನತು ಮಾಡಲಾಗಿದೆ ಎಂದು ಸ್ಪೀಕರ್ ಓಂ ಬಿರ್ಲಾ ಹೇಳಿದರು.

ಇನ್ನು ಸಂಸದರ ಅಮಾನತು ಆದೇಶವನ್ನು ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಪಾಸ್​ ಮಾಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com