ಥಾಯ್ಲೆಂಡ್, ಮಲೇಷ್ಯಾಗೆ ಹೋಗಿದ್ದ ದೆಹಲಿ ವ್ಯಕ್ತಿಗೆ ಕೊರೋನಾ: ಭಾರತದಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆ

ಭಾರತದಲ್ಲಿ ಮಾರಣಾಂತಿಕ ಕೊರೋನಾ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಈ ಹಿಂದೆ ಮಲೇಷ್ಯಾ ಮತ್ತು ಥಾಯ್ಲೆಂಡ್ ಗೆ ಹೋಗಿದ್ದ ದೆಹಲಿ ಮೂಲದ ವ್ಯಕ್ತಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಕಂಡಿಬಂದಿದೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಮಾರಣಾಂತಿಕ ಕೊರೋನಾ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದ್ದು, ಈ ಹಿಂದೆ ಮಲೇಷ್ಯಾ ಮತ್ತು ಥಾಯ್ಲೆಂಡ್ ಗೆ ಹೋಗಿದ್ದ ದೆಹಲಿ ಮೂಲದ ವ್ಯಕ್ತಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಕಂಡಿಬಂದಿದೆ ಎಂದು ತಿಳಿದುಬಂದಿದೆ.

ಇನ್ನು ಪ್ರಸ್ತುತ ಕೊರೋನಾ ಸೋಂಕು ಪೀಡಿತ ವ್ಯಕ್ತಿಯನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈತ ಸಂಪರ್ಕಿಸಿರಬಹುದಾದ ವ್ಯಕ್ತಿಗಳ ಮೇಲೂ ತೀವ್ರ ನಿಗಾ ಇರಿಸಲಾಗಿದೆ. ಪ್ರಸ್ತುತ ಸೋಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ. 

ಉತ್ತರ ಪ್ರದೇಶಕ್ಕೂ ಹಬ್ಬಿದ ಕೊರೋನಾ
ಇನ್ನು ಉತ್ತರ ಪ್ರದೇಶದ ಘಾಜಿಯಾಬಾದ್​ನಲ್ಲಿ ವ್ಯಕ್ತಿಯೋರ್ವರಿಗೆ ಕೊರೋನಾ ವೈರಸ್​ ಸೋಂಕು ತಗುಲಿರುವುದು ದೃಢಪಟ್ಟಿತ್ತು. ರಾಜಧಾನಿ ದೆಹಲಿ, ಕೇರಳ, ಜೈಪುರ ಮತ್ತು ಹೈದರಾಬಾದ್ ನಲ್ಲೂ ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಈ 31 ಸೋಂಕಿತರ ಪೈಕಿ 16 ಮಂದಿ ಇಟಲಿಯಿಂದ ಬಂದ ಪ್ರವಾಸಿಗರಾಗಿದ್ದು, ಕೇರಳದ ಮೂವರು ಸೋಂಕಿತರು ಗುಣಮುಖರಾಗಿದ್ದಾರೆ. ದೆಹಲಿಯಲ್ಲಿ ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಣಾಂತಿಕ ವೈರಸ್​ಗೆ ಜಗತ್ತಿನಾದ್ಯಂತ ಸುಮಾರು 3,300 ಜನರು ಮೃತಪಟ್ಟಿದ್ದು, ಸೋಂಕಿತರ ಸಂಖ್ಯೆ 92 ಸಾವಿರ ಗಡಿ ದಾಟಿದೆ.

ಕೊರೋನಾ ವೈರಸ್ ಹರಡುವಿಕೆ ನಿಗ್ರಹಿಸಲು ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳನ್ನು ಮಾರ್ಚ್ 31ರವರೆಗೆ ಮುಚ್ಚಲು ಡಿಸಿಎಂ ಮನೀಶ್ ಸಿಸೋಡಿಯಾ ಸೂಚಿಸಿದ್ದಾರೆ. 

ತೆಲಂಗಾಣದಲ್ಲಿ ವೈರಸ್ ಸೋಂಕು ತಗುಲಿರಬಹುದೆಂದು ಶಂಕಿಸಲಾದ ಇಬ್ಬರು ವ್ಯಕ್ತಿಗಳ ಸ್ಯಾಂಪಲ್​ಗಳ ಪರೀಕ್ಷೆ ನಡೆಸಲಾಗಿದೆ. ಇವರಿಬ್ಬರಿಗೆ ಸೋಂಕು ತಗುಲಿಲ್ಲದಿರುವುದು ಖಚಿತಪಟ್ಟಿದೆ. ಪುಣೆಯ ನ್ಯಾಷನಲ್ ಇನ್ಸ್​ಟಿಟ್ಯೂಟ್ ಆಫ್ ವೈರೋಲಜಿಯಲ್ಲಿ ಈ ಪರೀಕ್ಷೆ ನಡೆಸಲಾಗಿತ್ತು. ಇನ್ನು ಕೊರೋನಾ ಸೋಂಕು ತಗುಲಿರುವ ತೆಲಂಗಾಣ ಮೂಲದ ಬೆಂಗಳೂರು ಸಾಫ್ಟ್​ವೇರ್ ಎಂಜಿನಿಯರ್ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆಂದು ವೈದ್ಯರು ಹೇಳಿದ್ದಾರೆ.. ಹೈದರಾಬಾದ್​ನ ಗಾಂಧಿ ಆಸ್ಪತ್ರೆಯಲ್ಲಿ ಈ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com