ಜಮ್ಮು-ಕಾಶ್ಮೀರದಲ್ಲಿ ಇಬ್ಬರಲ್ಲಿ ಕೊರೋನಾ ವೈರಸ್ ಸೋಂಕು ಶಂಕೆ: ಶಾಲೆಗಳು ಬಂದ್

ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಸಾಂಬಾ ಜಿಲ್ಲೆಗಳಲ್ಲಿನ ಪ್ರಾಥಮಿಕ ಶಾಲೆಗಲನ್ನು ಬಂದ್ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜಮ್ಮು ಮತ್ತು ಸಾಂಬಾ ಜಿಲ್ಲೆಗಳಲ್ಲಿನ ಪ್ರಾಥಮಿಕ ಶಾಲೆಗಲನ್ನು ಬಂದ್ ಮಾಡಲಾಗಿದೆ. 

ಈ ಕುರಿತು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸಾಮಾಜಿಕ ಜಾಲತಾಣದಲ್ಲಿ ಸರಣಿ ಟ್ವೀಟ್ ಮಾಡಿದ್ದು, ಇಬ್ಬರು ಶಂಕಿತ ರೋಗಿಗಳ ಪರೀಕ್ಷಾ ವರದಿಗಳು ಬಂದಿದ್ದು, ಎರಡೂ ಪ್ರಕರಣಗಳು ಅತ್ಯಂತ ಗಂಭೀರವಾಗಿವೆ. ಪರೀಕ್ಷೆಯು ಪಾಸಿಟಿವ್ ಬರುವ ಸಾಧ್ಯತೆ ಹೆಚ್ಚಾಗಿದೆ ಎಂದು ಹೇಳಿದೆ. 

ಪ್ರಸ್ತುತ ಶಂಕಿತ ರೋಗಿಗಳನ್ನು ಜಮ್ಮುವಿನ ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಶಂಕಿತ ರೋಗಿಗಳ ಪೈಕಿ ಓರ್ವ ವ್ಯಕ್ತಿ ಮಹಿಳೆಯಾಗಿದ್ದಾರೆ. ಚೀನಾ. ಉತ್ತರ ಕಾಶ್ಮೀರ ಹಾಗೂ ಇರಾನ್ ಪ್ರವಾಸ ಮಾಡಿದ ಬಳಿಕ ಮಹಿಳೆಯಲ್ಲಿ ವೈರಸ್ ಪತ್ತೆಯಾಗಿದೆ. ವೈರಸ್ ಪತ್ತೆಯಾಗಿರುವ ಹಿನ್ನೆಲಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಜಮ್ಮು ಹಾಗೂ ಸಾಂಬಾ ಜಿಲ್ಲೆಗಳಲ್ಲಿ ಮಾರ್ಚ್ 31ರವರಗೂ ಪ್ರಾಥಮಿಕ ಶಾಲೆಗಲನ್ನು ಬಂದ್ ಮಾಡಲಾಗಿದೆ ಎಂದು ತಿಳಿಸಿದೆ. 

ವೈದ್ಯಕೀಯ ಸಲಹೆಗಳನ್ನು ನೀಡಿದ ಬಳಿಕವೂ ಇಬ್ಬರು ವ್ಯಕ್ತಿಗಳೂ ಆಸ್ಪತ್ರೆಯಿಂದ ಹೊರಹೋಗಿದ್ದರು. ಇದೀಗ ಇಬ್ಬರನ್ನೂ ಮತ್ತೆ ಆಸ್ಪತ್ರೆಯ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದೆ ಎಂದು ಸರ್ಕಾರಿ ವಕ್ತಾರರು ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com