ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ನಿಧನ: ಪ್ರಧಾನಿ, ಸಿಎಂ ಯಡಿಯೂರಪ್ಪ ಸೇರಿ ಗಣ್ಯರ ಕಂಬನಿ

ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇಂದು ನಿಧನರಾಗಿದ್ದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರೂ ಆಗಿದ್ದ ಭಾರದ್ವಾಜ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಂಸರಾಜ್ ಭಾರದ್ವಾಜ್
ಹಂಸರಾಜ್ ಭಾರದ್ವಾಜ್

ನವದೆಹಲಿ.ಬೆಂಗಳೂರು: ಕರ್ನಾಟಕದ ಮಾಜಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಇಂದು ನಿಧನರಾಗಿದ್ದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವರೂ ಆಗಿದ್ದ ಭಾರದ್ವಾಜ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

"ಮಾಜಿ ಕೇಂದ್ರ ಸಚಿವ ಹಂಸರಾಜ್ ಭಾರದ್ವಾಜ್ ನಿಧನ ದೂಃಖ ತಂದಿದೆ. ಅವರ ಕುಟುಂಬ ಮತ್ತು ಹಿತೈಷಿಗಳ ಶೋಕದ ಕ್ಷಣದಲ್ಲಿ ನಾನೂ ಭಾಗಿಯಾಗುವೆ. ಓಂ ಶಾಂತಿ" ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಮಾಜಿ ರಾಜ್ಯಪಾಲರ ನಿಧನಕ್ಕೆ ಸಂತಾಪ ಸೂಚಿಸಿದ್ದು "ಕರ್ನಾಟಕದ ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಕಾನೂನು ಸಚಿವ ಹಂಸರಾಜ್ ಭಾರದ್ವಾಜ್ ಅವರ ನಿಧನದ ಸುದ್ದಿ ದುಃಖಕರ. ಅವರ ನಿಧನದಿಂದ ಉತ್ತಮ ಕಾನೂನು ತಜ್ಞ, ಆಡಳಿತಗಾರರೊಬ್ಬರನ್ನು  ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿಯನ್ನು ದಯಪಾಲಿಸಲಿ, ಕುಟುಂಬಕ್ಕೆ ಅಗಲಿಕೆಯ ದುಃಖ  ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದಿದ್ದಾರೆ.

ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ "ನಾನು ಕಾನೂನು ಸಚಿವನಾಗಿ ಕಾರ್ಯ ನಿರ್ವಹಿಸಿದಾಗ  ರಾಜ್ಯಪಾಲರಾಗಿದ್ದ ಶ್ರೀ ಭಾರದ್ವಾಜ್ ರವರನ್ನು ಸಾಕಷ್ಟು ಬಾರಿ ಭೇಟಿ ಮಾಡುವ ಅವಕಾಶಗಳು ಸಿಕ್ಕಿದ್ದವು.  ಅವರು ಬಹಳ ಓದಿಕೊಂಡಿದ್ದರು.ಕೇಂದ್ರದಲ್ಲಿ ಕಾನೂನು ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು.‌ ನಮ್ಮ ಸರ್ಕಾರದ ಜೊತೆ ಎಂದೂ ಸಹಮಧುರ ಸಂಬಂಧವಿರಲಿಲ್ಲ.ಅವರ ಆತ್ಮಕ್ಕೆ ಸದ್ಗತಿ ದೊರಕಲಿ" ಎಂದು ಟ್ವೀಟ್ ಮಾಡಿದ್ದಾರೆ.

"ಭಾರತದ ಕಾನೂನು ಸಚಿವರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ ಹಂಸರಾಜ್ ಭಾರದ್ವಾಜ್ ಅವರ ನಿಧನಕ್ಕಾಗಿ ತೀವ್ರ ಸಂತಾಪ ಸೂಚಿಸುತ್ತೇನೆ. ನಾವು ಸಂಸತ್ತಿನಲ್ಲಿ ಒಟ್ಟಿಗೆ ಇದ್ದೆವು. ಅವರ ಆತ್ಮಕ್ಕೆ ಶಾಂತಿ ಸಿಗಲಿ" ಕಾನೂನು ಸಚಿವರಾದ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

"ಕೇಂದ್ರದ ಮಾಜಿ ಕಾನೂನು ಸಚಿವ ಹಂಸರಾಜ್ ಭಾರದ್ವಾಜ್ ವರು ಇಂದು ನಿಧನರಾಗಿದ್ದಾರೆ. ಈ ಸುದ್ದಿ ಕೇಳಿ ನನಗೆ ಬೇಸರವಾಯಿತು. ರಾಜೀವ್ ಗಾಂಧಿ ಸಮಯದಿಂದಲೂ ನಾನವರನ್ನು ಬಲ್ಲೆ.  ಪಿ.ವಿ. ನರಸಿಂಹ ರಾವ್ಂಡ್ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿಯಾಗಿದ್ದಾಗಲೂ ಅವರು ಸೇವೆ ಸಲ್ಲಿಸಿದ್ದರು. ಅವರು ವಿನಯಶೀಲ, ಸ್ಪಷ್ಟ ನಿಲುವಿನ ವ್ಯಕ್ತಿ" ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೇಂದ್ರದ ಮಾಜಿ ಸಚಿವರ ನಿಧನಕ್ಕೆ ಪ್ರತಿಕ್ರಯಿಸಿದ್ದು "ಮಾಜಿ ಸಚಿವ ಮತ್ತು ರಾಜ್ಯಪಾಲರಾದ ಹಂಸರಾಜ್ ಭಾರದ್ವಾಜ್  ಅವರ ನಿಧನದಿಂದ ತೀವ್ರ ದುಃಖವಾಗಿದೆ. ನ್ಯಾಯವನ್ನು ಗ್ರಾಮೀಣ  ಪ್ರದೇಶಗಳಿಗೆ ಕರೆತರಲು ಶ್ರಮಿಸಿದ  ದೀರ್ಘಕಾಲದ ಸಹವರ್ತಿ ಮತ್ತು ಸ್ನೇಹಿತರಾಗಿದ್ದರು. ಅವರ ಕಾನೂನು ಕುಶಾಗ್ರಮತಿ, ಚತುರತೆ ಮತ್ತು ನವೀನ ಆಲೋಚನೆಗಳು ಎಂದೆಂದಿಗೂ ನೆನಪಿನಲ್ಲಿ ಉಳಿಯುತ್ತವೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನನ್ನ ಸಂತಾಪವಿದೆ" ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com