ಕಾಶ್ಮೀರ: ಸೇನಾ ಶಸ್ತ್ರಗಾರದಲ್ಲಿ ಸ್ಫೋಟ, ಇಬ್ಬರು ಕಾರ್ಮಿಕರು ಸಾವು

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿರುವ ಸೇನಾ ಶಸ್ತ್ರಗಾರದಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Published: 09th March 2020 04:28 PM  |   Last Updated: 09th March 2020 04:28 PM   |  A+A-


Lucknow: Two dead, several injured after powerful blast at illegal crackers godown

ಸಾಂದರ್ಭಿಕ ಚಿತ್ರ

Posted By : Lingaraj Badiger
Source : PTI

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿರುವ ಸೇನಾ ಶಸ್ತ್ರಗಾರದಲ್ಲಿ ಸೋಮವಾರ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಖುಂದ್ರು ಎಂಬಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿಯೇ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ಕಾರ್ಮಿಕರನ್ನು ಫಯಾಜ್ ಅಹಮದ್ ಭಟ್ ಹಾಗೂ ಗುಲ್ಜರ್ ಅಹ್ಮದ್ ಖಾನ್ ಎಂದು ಗುರುತಿಸಲಾಗಿದೆ.

ಖುಂದ್ರು ಕಾಶ್ಮೀರ ಕಣಿವೆಯಲ್ಲಿರುವ ಅತಿ ದೊಡ್ಡ ಸೇನಾ ಶಸ್ತ್ರಗಾರವಾಗಿದೆ. 207ರಲ್ಲಿ ಈ ಶಸ್ತ್ರಗಾರದಲ್ಲಿ ಸ್ಫೋಟ ಸಂಭವಿಸಿತ್ತು. ಪರಿಣಾಮ ಹಲವು ಜನ ಮೃತಪಟ್ಟಿದ್ದರು.

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp