ಜ್ವರ, ಕೆಮ್ಮು ಇದ್ದರೆ ಬರಬೇಡಿ: ತಿರುಪತಿ, ತಿರುಮಲ ದೇಗುಲ

ಕೊರೋನಾ ವೈರಸ್ ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಹಿನ್ನೆಲೆಯಲ್ಲಿ ಕೆಮ್ಮು, ನೆಗಡಿ, ಜ್ವರ ಇದ್ದರೆ ತಿರುಮಲಕ್ಕೆ ಬರಬೇಡಿ ಎಂದು ದೇಗುಲದ ಆಡಳಿತ ಮಂಡಳಿ ಜನತೆ ಬಳಿ ಮನವಿ ಮಾಡಿಕೊಂಡಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ತಿರುಪತಿ: ಕೊರೋನಾ ವೈರಸ್ ವಿಶ್ವದಾದ್ಯಂತ ಭೀತಿ ಹುಟ್ಟಿಸಿರುವ ಹಿನ್ನೆಲೆಯಲ್ಲಿ ಕೆಮ್ಮು, ನೆಗಡಿ, ಜ್ವರ ಇದ್ದರೆ ತಿರುಮಲಕ್ಕೆ ಬರಬೇಡಿ ಎಂದು ದೇಗುಲದ ಆಡಳಿತ ಮಂಡಳಿ ಜನತೆ ಬಳಿ ಮನವಿ ಮಾಡಿಕೊಂಡಿದೆ. 

ಕೊರೋನಾ ವೈರಸ್ ತಡೆಯಲು ತಿರುಮಲ ವೆಂಕಟೇಶ್ವರ ದೇವಸ್ಥಾನ ಮಮಂಡಳಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಕೆಮ್ಮು, ನೆಗಡಿ ಹಾಗೂ ಜ್ವರ ಇದ್ದರೆ ತಿರುಮಕ್ಕೆ ಬಾರದಂತೆ ಭಕ್ತರಿಗೆ ಮನವಿ ಮಾಡಿಕೊಂಡಿದ್ದು, ಭಕ್ತರು ಮಾಸ್ಕ್ ಗಳು ಹಾಗೂ ಹ್ಯಾಂಡ್ ಸ್ಯಾನಿಟೈಸರ್'ಗಳನ್ನು ತರಬೇಕು ಎಂದೂ ಸೂಚಿಸಿದೆ. 

ಕೆಮ್ಮು, ನೆಗಡಿ, ಜ್ವರ ಕಾಣಿಸಿಕೊಂಡರೆ ತಿರುಪತಿಗೆ ಬರುವುದನ್ನು ಭಕ್ತರು ಮುಂದುಡಬೇಕು ಅಥವಾ ರದ್ದುಗೊಳಿಸಬೇಕು. ತಿರುಮಲದಲ್ಲಿ ಸದಾ ಜನಜಂಗುಳಿ ಇರುವ ಕಾರಣ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಭಕ್ತರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದೆ. 

ಈ ನಡುವೆ ದೇವಾಲಯಕ್ಕೆ ಆಗಮಿಸುವ ಭಕ್ತರ ಥರ್ಮಲ್ ಸ್ಕ್ರೀನಿಂಗ್'ಗೆ ಕ್ರಮ ಕೈಗೊಳ್ಳಲಾಗಿದ್ದು, ಜ್ವರ ಬಾಧೆ ಇದ್ದ ಭಕ್ತರನ್ನು ವೆಂಕಟೇಶ್ವರ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com