ಯೋಗದಿನಾಚರಣೆ: ಈ ಬಾರಿ ಪ್ರಧಾನಿ ಮೋದಿಗೆ ಆತಿಥ್ಯ ನೀಡಲಿರುವ ನಗರ ಯಾವುದು ಗೊತ್ತೇ?

ಅಂತಾರಾಷ್ಟ್ರೀಯ ಯೋಗದಿನಾಚರಣೆಗೆ ಆಯುಷ್ ಸಚಿವಾಲಯ ತಯಾರಿ ನಡೆಸಿಕೊಳ್ಳುತ್ತಿದ್ದು, ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿರುವ ನಗರವನ್ನೂ ಅಂತಿಮಗೊಳಿಸಲಾಗಿದೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಅಂತಾರಾಷ್ಟ್ರೀಯ ಯೋಗದಿನಾಚರಣೆಗೆ ಆಯುಷ್ ಸಚಿವಾಲಯ ತಯಾರಿ ನಡೆಸಿಕೊಳ್ಳುತ್ತಿದ್ದು, ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿರುವ ನಗರವನ್ನೂ ಅಂತಿಮಗೊಳಿಸಲಾಗಿದೆ. 

ಸಚಿವಾಲಯದ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಈ ಬಾರಿ ಪ್ರಧಾನಿ ನರೇಂದ್ರ ಮೋದಿ, ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕೇಂದ್ರಾಡಳಿತ ಪ್ರದೇಶವಾದ ಲಡಾಕ್ ನ ರಾಜಧಾನ್ ಲೇಹ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಜೂ.21 ರಂದು ನಡೆಯಲಿರುವ ಯೋಗದಿನಾಚರಣೆಯಂದು ಪ್ರಧಾನಿ ಮೋದಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಮಾಡಲಿದ್ದು, 15,000-20,000 ಜನರು ಭಾಗಿಯಾಗುವ ನಿರೀಕ್ಷೆ ಇದೆ. ಅತಿ ಎತ್ತರದ ಪ್ರದೇಶವಾದ ಲೇಹ್ ನಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಜನರು ಯೋಗ ದಿನಾಚರಣೆಯಲ್ಲಿ ಭಾಗಿಯಾಗುತ್ತಿರುವುದು ವಿಶೇಷವಾಗಿದೆ ಎಂದು ಆಯುಷ್ ಸಚಿವ ಶ್ರೀಪಾದ್ ನಾಯ್ಕ್ ಹೇಳಿದ್ದಾರೆ. ಕಳೆದ ವರ್ಷ ರಾಂಚಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಭಾಗಿಯಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com