ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿರಕ್ಕೆ ಪ್ರಧಾನಿ ಮೋದಿಯೇ ಕಾರಣ: ರಾಹುಲ್ ಗಾಂಧಿ 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯ ಪ್ರದೇಶ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಮೌನ ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಜ್ಯೋತಿರಾದಿತ್ಯ ಸಿಂಧ್ಯಾ, ರಾಹುಲ್ ಗಾಂಧಿ, ಕಮಲ್ ನಾಥ್ (ಸಂಗ್ರಹ ಚಿತ್ರ)
ಜ್ಯೋತಿರಾದಿತ್ಯ ಸಿಂಧ್ಯಾ, ರಾಹುಲ್ ಗಾಂಧಿ, ಕಮಲ್ ನಾಥ್ (ಸಂಗ್ರಹ ಚಿತ್ರ)

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯ ಪ್ರದೇಶ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಮೌನ ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಜ್ಯೋತಿರಾದಿತ್ಯ ಸಿಂಧ್ಯಾ ಸೇರಿದಂತೆ ಕಾಂಗ್ರೆಸ್ ನ 23 ಶಾಸಕರು ಮಧ್ಯ ಪ್ರದೇಶದಲ್ಲಿ ರಾಜೀನಾಮೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ, ಕೇಂದ್ರದ ಬಿಜೆಪಿ ಸರ್ಕಾರ ದೇಶದ ಆರ್ಥಿಕತೆ, ತೈಲ ಬೆಲೆ ಇಳಿಕೆ ಬಗ್ಗೆ ಗಮನ ಹರಿಸಬೇಕು. ಅದು ಬಿಟ್ಟು ಒಂದು ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಧಾನಿ ನೋಡುತ್ತಿದ್ದಾರೆ. ತೈಲ ಬೆಲೆ ಇಳಿಕೆಯ ಪ್ರಯೋಜನವನ್ನು ಜನರಿಗೆ ಪ್ರತಿ ಲೀಟರ್ ಪೆಟ್ರೋಲ್ ಗೆ 60 ರೂಪಾಯಿ ಮಾಡುವ ಮೂಲಕ ತಲುಪಿಸಬಹುದೇ, ಅರ್ಥವ್ಯವಸ್ಥೆಗೆ ಉತ್ತೇಜನ ನೀಡಬಹುದೇ ಎಂದು ಕೇಳಿದ್ದಾರೆ. 


ಮಧ್ಯ ಪ್ರದೇಶದ ಕಾಂಗ್ರೆಸ್ ರಾಜಕೀಯದಲ್ಲಿ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಕಡೆಗಣಿಸಲಾಗುತ್ತಿತ್ತು, ಇದರಿಂದ ಅವರು ರಾಜೀನಾಮೆ ನೀಡಿದ್ದಾರೆ ಎಂಬ ಆರೋಪವನ್ನು ಇಂದು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಳ್ಳಿಹಾಕಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com