ಕೊರೋನಾ ವೈರಸ್"ನ್ನು ಸಾಂಕ್ರಾಮಿಕ ರೋಗವೆಂದು ರಾಜ್ಯ ಘೋಷಿಸಿಲ್ಲ: ಆರೋಗ್ಯ ಇಲಾಖೆ

ಕೊರೋನಾ ವೈರಸ್'ನ್ನು ರಾಜ್ಯ ಸರ್ಕಾರ ಸಾಂಕ್ರಾಮಿಕ ರೋಗವೆಂದು ಇನ್ನೂ ಘೋಷಣೆ ಮಾಡಿಲ್ಲ. ಸಾಂಕ್ರಾಮಿಕ ರೋಗ ಕುರಿತ ಇಲ್ಲದ ಸುದ್ದಿಗಳನ್ನು ನಂಬಬೇಡಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ವೈರಸ್'ನ್ನು ರಾಜ್ಯ ಸರ್ಕಾರ ಸಾಂಕ್ರಾಮಿಕ ರೋಗವೆಂದು ಇನ್ನೂ ಘೋಷಣೆ ಮಾಡಿಲ್ಲ. ಸಾಂಕ್ರಾಮಿಕ ರೋಗ ಕುರಿತ ಇಲ್ಲದ ಸುದ್ದಿಗಳನ್ನು ನಂಬಬೇಡಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸಲು ರಾಜ್ಯ ಸರ್ಕಾರವು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಕೊರೋನಾ ಸೋಂಕನ್ನು ಕರ್ನಾಟಕ ರಾಜ್ಯ ಸಾಂಕ್ರಾಮಿಕ ರೋಗಗಳ ವ್ಯಾಪ್ತಿಗೆ ತಂದಿದೆ. ಇದಕ್ಕಾಗಿ ನಿಯಮಾವಳಿಗಳನ್ನೂ ರೂಪಿಸಿದೆ ಎಂಬ ಸುದ್ದಿಗಳು ಪ್ರಕಟವಾಗಿತ್ತು.
 
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುು ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಅವರು, ನಾವಿನ್ನೂ ಕೊರೋನಾ ವೈರಸನ್ನು ಸಾಂಕ್ರಾಮಿಕ ರೋಗವೆಂದು ಘೋಷಣೆ ಮಾಡಿಲ್ಲ. ದಯವಿಟ್ಟು ಇಂತಹ ಸುದ್ದಿಗಳನ್ನು ನಂಬಬೇಡಿ. ಕಚೇರಿಗಳು ಹಾಗೂ ಶಾಲೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಪರಿಸ್ಥಿತಿ ಹದಹಗೆಟ್ಟಿದ್ದೇ ಆದರೆ, ಅಧಿಕೃತ ಮಾತುಕತೆಗಳ ಮೂಲಕ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ರಾಜ್ಯ ಸರ್ಕಾರ ಕೊರೋನಾವನ್ನು ಸಾಂಕ್ರಾಮಿಕ ರೋಗವೆಂದು ಘೋಷೆ ಮಾಡಿದ್ದು, ಕಚೇರಿಗಳು ಹಾಗೂ ಶಾಲೆಗಳು ಮುಚ್ಚುವಂತೆ ಆದೇಶಿಸಿದೆ ಎಂಬ ಸುದ್ದಿಗಳು ಸಂಪೂರ್ಣ ಸುಳ್ಳು. ಇದರಲ್ಲಿ ಸತ್ಯಾಂಶವಿಲ್ಲ. ಸರ್ಕಾರದೊಂದಿಗೆ ಮಾತುಕತೆಗಳು ನಡೆದಿದ್ದೇ ಆದರೆ, ನಾವೇ ಅಧಿಕೃತವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತೇವೆ. ರಾಜ್ಯದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಘೋಷಣೆ ಮಾಡಿಲ್ಲ. ಶಾಲೆಗಳು ಹಾಗೂ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com