ಕೊರೋನಾ ವೈರಸ್: ಪುಣೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಪಾಸಿಟಿವ್, ಭಾರತದಲ್ಲಿ ಸೋಂಕಿತರ ಸಂಖ್ಯೆ 84ಕ್ಕೆ ಏರಿಕೆ

ದೇಶದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ ಪುಣೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ
ಚೆನ್ನೈ ಏರ್ ಪೋರ್ಟ್ ನಲ್ಲಿ ಕಂಡುಬಂದ ದೃಶ್ಯ
ಚೆನ್ನೈ ಏರ್ ಪೋರ್ಟ್ ನಲ್ಲಿ ಕಂಡುಬಂದ ದೃಶ್ಯ

ನವದೆಹಲಿ: ದೇಶದಲ್ಲಿ ಮಾರಣಾಂತಿಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ ಪುಣೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 84ಕ್ಕೆ ಏರಿಕೆಯಾಗಿದೆ.

ಅಮೆರಿಕಕ್ಕೆ ಪ್ರವಾಸ ಹೋಗಿದ್ದ ವ್ಯಕ್ತಿಯಲ್ಲಿ ಕೊವಿಡ್ - 19 ಪತ್ತೆಯಾಗಿದ್ದು, ಇದರಿಂದ ನಗರದಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಪುಣೆ ವಿಭಾಗೀಯ ಆಯುಕ್ತ ದೀಪಕ್ ಮೈಶೇಕರ್ ಅವರು ತಿಳಿಸಿದ್ದಾರೆ.

ಇದಕ್ಕು ಮುನ್ನ ಮಹಾರಾಷ್ಟ್ರ ನಾಗ್ಪುರದಲ್ಲಿ ಎರಡು ಕೊರೋನಾ ವೈರಸ್ ಪ್ರಕರಣ ಪತ್ತೆಯಾಗಿತ್ತು. 

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ಪಡೆದವರಲ್ಲಿ ಭಾರತದಲ್ಲಿ ನಾಲ್ವರು ರೋಗಿಗಳು ಗುಣಮುಖರಾಗುತ್ತಿದ್ದು, ದುಬೈಯಿಂದ ಬಂದ ಕಲಬುರಗಿಯ ವೃದ್ಧ ಮೃತಪಟ್ಟಿದ್ದಾರೆ. 

ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಬಿಹಾರ, ಉತ್ತರ ಪ್ರದೇಶ ಹಾಗೂ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಮಾಲ್, ಚಿತ್ರಮಂದಿರ ಬಂದ್ ಮಾಡಿದ್ದು, ಎಲ್ಲಾ ರೀತಿಯ ಕ್ರೀಡಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಅಲ್ಲದೆ ಶಾಲಾ ಕಾಲೇಜ್ ಗಳಿಗೂ ರಜೆ ಘೋಷಿಸಲಾಗಿದೆ.

ಇನ್ನು ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯನ್ನು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com