ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಳ

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ. 4ರಷ್ಟು ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಪ್ರಕಾಶ್ ಜಾವಡೇಕರ್
ಪ್ರಕಾಶ್ ಜಾವಡೇಕರ್

ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ. 4ರಷ್ಟು ಹೆಚ್ಚಿಸಲು ಶುಕ್ರವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಶಾಸ್ತ್ರಿ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು, ಕೇಂದ್ರ ಸರ್ಕಾರಿ ನೌಕರರ ಡಿಎ ಶೇ.4 ರಷ್ಟು ಹೆಚ್ಚಿಸಲು ಸಂಪುಟ ತೀರ್ಮಾನಿಸಿದೆ ಎಂದರು.

ಸದ್ಯ ಶೇ.17 ರಷ್ಟು ಇರುವ ತುಟ್ಟಿಭತ್ಯೆಯನ್ನು ಈಗ ಶೇ.21ಕ್ಕೆ ಹೆಚ್ಚಿಸಲಾಗಿದ್ದು, ಇದರಿಂದ 50 ಲಕ್ಷ ನೌಕರರು ಮತ್ತು 65 ಲಕ್ಷ ಪಿಂಚಣಿದಾರರಿಗೆ ಅನುಕೂಲ ಆಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com