ಗೃಹ ಬಂಧನದಿಂದ ಬಿಡುಗಡೆಯಾದ ಫಾರೂಕ್ ಅಬ್ದುಲ್ಲಾ ಹೇಳಿದ್ದಿಷ್ಟು 

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಗೃಹ ಬಂಧನದಿಂದ ಬಿಡುಗಡೆಯಾಗಿದ್ದು, ತಮ್ಮ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ ಎಲ್ಲಾ ಸಂಸದರಿಗೂ ಧನ್ಯವಾದ ತಿಳಿಸಿದ್ದಾರೆ. 
ಗೃಹ ಬಂಧನದಿಂದ ಬಿಡುಗಡೆಯಾದ ಫಾರೂಕ್ ಅಬ್ದುಲ್ಲಾ ಹೇಳಿದ್ದಿಷ್ಟು
ಗೃಹ ಬಂಧನದಿಂದ ಬಿಡುಗಡೆಯಾದ ಫಾರೂಕ್ ಅಬ್ದುಲ್ಲಾ ಹೇಳಿದ್ದಿಷ್ಟು

ಶ್ರೀನಗರ: ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ, ಎನ್ ಸಿ ನಾಯಕ ಫಾರೂಕ್ ಅಬ್ದುಲ್ಲಾ ಗೃಹ ಬಂಧನದಿಂದ ಬಿಡುಗಡೆಯಾಗಿದ್ದು, ತಮ್ಮ ಸ್ವಾತಂತ್ರ್ಯಕ್ಕಾಗಿ ಧ್ವನಿ ಎತ್ತಿದ ಎಲ್ಲಾ ಸಂಸದರಿಗೂ ಧನ್ಯವಾದ ತಿಳಿಸಿದ್ದಾರೆ. 
 
ನಾನು ಈಗ ಸ್ವತಂತ್ರ, ಬೇರೆಲ್ಲಾ ನಾಯಕರು ಬಿಡುಗಡೆಯಾದ ನಂತರವಷ್ಟೇ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುವುದಕ್ಕೆ ಸಾಧ್ಯ. ಬೇರೆ ರಾಜಕೀಯ ನಾಯಕರೂ ಸಹ ಬಿಡುಗಡೆಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಅಬ್ದುಲ್ಲಾ ತಿಳಿಸಿದ್ದಾರೆ. ಫಾರೂಕ್ ಅಬ್ದುಲ್ಲಾ ಅವರ ಗೃಹಬಂಧನದ ಆದೇಶ ರದ್ದುಗೊಳಿಸಿರುವುದನ್ನು ಎಲ್ಲಾ ರಾಜಕೀಯ ಪಕ್ಷದ ನಾಯಕರೂ ಸ್ವಾಗತಿಸಿದ್ದಾರೆ.

ಫಾರೂಕ್ ಅಬ್ದುಲ್ಲಾ ಗೃಹಬಂಧನ ರದ್ದು: ಕಾಂಗ್ರೆಸ್ ಸ್ವಾಗತ

ಮಾಜಿ ಮುಖ್ಯಮಂತ್ರಿ ಫಾರಾಕ್ ಅಬ್ದುಲಾ ಅವರ ಗೃಹ ಬಂಧನ ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಜಮ್ಮು ಕಾಶ್ಮೀರ ಕಾಂಗ್ರೆಸ್ ಸ್ವಾಗತಿಸಿದೆ. ಜೆಕೆಪಿಸಿಸಿ ಮುಖ್ಯ ವಕ್ತಾರ ರವೀಂದ್ರ ಶರ್ಮಾ ಈ ಕುರಿತು ಪ್ರತಿಕ್ರಿಯಿಸಿ, ಸರ್ಕಾರದ ನಿರ್ಧಾರ ತಡವಾದರೂ ಸ್ವಾಗತಾರ್ಹ ಎಂದು ತಿಳಿಸಿದ್ದಾರೆ.

ಅಲ್ಲದೆ ಇನ್ನುಳಿದ ಮುಖಂಡರನ್ನೂ ವಿಳಂಬನೀತಿ ಅನುಸರಿಸದೆ ಗೃಹಬಂಧನದಿಂದ ಮುಕ್ತಗೊಳಿಸುವಂತೆ ಅವರು ಆಗ್ರಹಿಸಿದ್ದರೆ. 
ಮುಖ್ಯವಾಹಿನಿಯ ಮುಖಂಡರ ಗೃಹಬಂಧನವು ಪ್ರಜಾಪ್ರಭುತ್ವ ಪದ್ಧತಿಯ ಸ್ಫೂರ್ತಿಗೆ ವಿರುದ್ಧವಾದುದು ಎಂದು ವಾದಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com