ಮಧ್ಯಪ್ರದೇಶ: ಬಿಕ್ಕಟ್ಟಿನ ಮಧ್ಯೆ ರಾಜ್ಯಪಾಲರನ್ನು ಭೇಟಿಯಾದ ಕಮಲ್ ನಾಥ್!
ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.
Published: 13th March 2020 12:41 PM | Last Updated: 13th March 2020 12:41 PM | A+A A-

ಮುಖ್ಯಮಂತ್ರಿ ಕಮಲ್ ನಾಥ್, ರಾಜ್ಯಪಾಲ ಟಂಡನ್
ಭೋಪಾಲ್: ಮೂರು ದಿನಗಳ ಹಿಂದೆ 22 ಕಾಂಗ್ರೆಸ್ ಬಂಡಾಯ ಶಾಸಕರು ರಾಜೀನಾಮೆ ನೀಡಿರುವುದರಿಂದ ಮಧ್ಯ ಪ್ರದೇಶ ರಾಜಕೀಯದಲ್ಲಿ ಬಿಕ್ಕಟ್ಟು ತಲೆದೋರಿರುವಂತೆ ಮುಖ್ಯಮಂತ್ರಿ ಕಮಲ್ ನಾಥ್ ಇಂದು ರಾಜ್ಯಪಾಲ ಲಾಲ್ ಜಿ ಟಂಡನ್ ಅವರನ್ನು ಭೇಟಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಬೇಗುದಿಯಿಂದಾಗಿ ಸರ್ಕಾರ ಪತನದ ಅಂಚಿನತ್ತ ಸಾಗಿರುವಂತೆ ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿದ ಕಮಲ್ ನಾಥ್ , ರಾಜ್ಯಪಾಲ ಟಂಡನ್ ಅವರನ್ನು ಭೇಟಿಯಾಗಿದ್ದು, ಪ್ರಸ್ತುತ ರಾಜಕೀಯ ಪರಿಸ್ಥಿತಿ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ಸಚಿವರು ಸೇರಿದಂತೆ 19 ಮಂದಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಬೆಂಗಳೂರಿನ ರೆಸಾರ್ಟ್ ವೊಂದರಲ್ಲಿ ಇರಿಸಿದೆ ಎಂದು ಆಡಳಿತಾರೂಢ ಕಾಂಗ್ರೆಸ್ ಮಾಡಿರುವ ಮಾಡಿರುವ ಆರೋಪವನ್ನು ಪ್ರತಿಪಕ್ಷ ಬಿಜೆಪಿ ಅಲ್ಲಗಳೆದಿದೆ.
ಸಿಂಧಿಯಾ ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ, ಅವರ ಆಪ್ತರಾಗಿರುವ ಆರು ಸಚಿವರು ಸೇರಿದಂತೆ 19 ಮಂದಿ ಶಾಸಕರು ಬೆಂಗಳೂರಿನಿಂದ ಭೋಪಾಲ್ ಗೆ ಬಂದು ರಾಜೀನಾಮೆ ಪತ್ರವನ್ನು ವಿಧಾನಸಭೆ ಸ್ಪೀಕರ್ ಅವರಿಗೆ ಸಲ್ಲಿಸಲಿದ್ದಾರೆ ಎಂಬ ಅನಧಿಕೃತ ವರದಿಗಳ ನಡುವೆ ಕಮಲ್ ನಾಥ್ ರಾಜ್ಯಪಾಲರನ್ನು ಭೇಟಿ ಮಾಡಿರುವುದು ಮಧ್ಯಪ್ರದೇಶ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.