ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಕಾರ್ಯತಂತ್ರ ರೂಪಿಸಿ: ಸಾರ್ಕ್ ದೇಶಗಳಿಗೆ ಪ್ರಧಾನಿ ಮೋದಿ

ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಮಾರಣಾಂತಿಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಜಂಟಿ ಕಾರ್ಯತಂತ್ರ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ದೇಶಗಳ ನಾಯಕರಿಗೆ ಶುಕ್ರವಾರ ಕರೆ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಜಗತ್ತನ್ನೇ ಬೆಚ್ಚಿ ಬೀಳಿಸಿರುವ ಮಾರಣಾಂತಿಕ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಜಂಟಿ ಕಾರ್ಯತಂತ್ರ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ಕ್ ದೇಶಗಳ ನಾಯಕರಿಗೆ ಶುಕ್ರವಾರ ಕರೆ ನೀಡಿದ್ದಾರೆ.

"ನಮ್ಮ ಗ್ರಹವು COVID-19 ನೊವೆಲ್ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದೆ. ವಿವಿಧ ಹಂತಗಳಲ್ಲಿ, ಸರ್ಕಾರಗಳು ಮತ್ತು ಜನರು ಇದನ್ನು ಎದುರಿಸಲು ತಮ್ಮ ಅತ್ಯುತ್ತಮ ಪ್ರಯತ್ನ ಮಾಡುತ್ತಿದ್ದಾರೆ" ಎಂದು ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ.

ಜಾಗತಿಕ ಜನಸಂಖ್ಯೆಯ ಗಮನಾರ್ಹ ಸಂಖ್ಯೆಯ ನೆಲೆಯಾಗಿರುವ ದಕ್ಷಿಣ ಏಷ್ಯಾ, ಜನರು ಆರೋಗ್ಯವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸಾರ್ಕ್ ದೇಶಗಳ ನಾಯಕರು ಕೊರೋನಾ ವೈರಸ್ ವಿರುದ್ಧ ಜಂಟಿ ಹೋರಾಟ ನಡೆಸಲು ಕಾರ್ಯತಂತ್ರ ರೂಪಿಸಬೇಕು ಮತ್ತು ನಮ್ಮ ತಂತ್ರ ಇಡೀ ವಿಶ್ವಕ್ಕೆ ಮಾದರಿಯಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ನಮ್ಮ ನಾಗರಿಕರನ್ನು ಆರೋಗ್ಯವಾಗಿಡಲು ಸಾರ್ಕ್ ನಾಯಕರು ವಿಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯತಂತ್ರದ ಬಗ್ಗೆ ನಾವು ಚರ್ಚಿಸಬಹದು ಎಂದು ಮೋದಿ ಸಲಹೆ ನೀಡಿದ್ದಾರೆ.

 ಸೌತ್ ಏಷಿಯಾ ಅಸೋಸಿಯೇಷನ್ ಫಾರ್ ರೀಜನಲ್ ಕೊಆಪರೇಷನ್(ಸಾರ್ಕ್) ಭಾರತ, ನೇಪಾಳ, ಆಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ಪಾಕಿಸ್ತಾನ, ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಒಳಗೊಂಡ ಪ್ರಾದೇಶಿಕ ಅಂತರ್ ಸರ್ಕಾರಿ ಸಂಸ್ಥೆಯಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com