ಕೊರೋನಾವೈರಸ್ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ದೇಶದ ಆರ್ಥಿಕತೆ ನಾಶ-ರಾಹುಲ್  ಗಾಂಧಿ

ಜಾಗತಿಕವಾಗಿ ಹಬ್ಬುತ್ತಿರುವ ಮಾರಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ತುಂಬಾ ಅಪಾಯಕಾರಿ. ಅದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ದೇಶದ ಆರ್ಥಿಕತೆ ನಾಶವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಜಾಗತಿಕವಾಗಿ ಹಬ್ಬುತ್ತಿರುವ ಮಾರಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ತುಂಬಾ ಅಪಾಯಕಾರಿ. ಅದರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ದೇಶದ ಆರ್ಥಿಕತೆ ನಾಶವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಆರ್ಥಿಕತೆ ನಿರ್ವಹಣೆ ಹಾಗೂ ಕೊರೋನಾ ವೈರಸ್ ನಿಯಂತ್ರಣ ಸಂಬಂಧ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ನರೇಂದ್ರ ಮೋದಿ ಆರ್ಥಿಕತೆಯ ಚಕ್ರದೊಳಗೆ ನಿದ್ರಿಸುತ್ತಿದ್ದಾರೆ  ಎಂದು ಆರೋಪಿಸಿದ್ದಾರೆ. ಇದು ಸುನಾಮಿಯ ಆರಂಭವಷ್ಟೇ ಮುಂದೆ ಸಾಕಷ್ಟು ಪರಿಣಾಮ ಬೀರಲಿದೆ ಎಂದು ಅವರು ಹೇಳಿದ್ದಾರೆ

ಷೇರು ಮಾರುಕಟ್ಟೆಯಲ್ಲಿ ಏನಾಗುತ್ತಿದೆ ಎಂಬುದನ್ನು ನೋಡುತ್ತಿದ್ದೇವೆ. ಮೋದಿ ಸರ್ಕಾರದಿಂದ ಆರ್ಥಿಕತೆ ಹಾಳಾಗಿದೆ. ಆರ್ಥಿಕತೆ ಬಗ್ಗೆ ನರೇಂದ್ರ ಮೋದಿ ಒಂದು ಮಾತನಾಡುತ್ತಿಲ್ಲ, ನಿರ್ಮಲಾ ಸೀತಾರಾಮನ್ ಅವರಿಗೆ ಆರ್ಥಿಕತೆ ಅರ್ಥವಾಗುತ್ತಿಲ್ಲ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com