ಸಾರ್ಕ್ ವಿಡಿಯೋ ಕಾನ್ಫರೆನ್ಸ್: ಭಾರತ ಆಕ್ರಮಿತ ಜಮ್ಮು-ಕಾಶ್ಮೀರ, ಪಾಕ್ ಸಚಿವ ಹೇಳಿಕೆಗೆ ಪಿಎಂ ಮೋದಿ ಸೈಲೆಂಟ್ ತಿರುಗೇಟು!

ಕೊರೋನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಪರೆನ್ಸ್ ನಲ್ಲಿ ಪಾಕಿಸ್ತಾನದ ಆರೋಗ್ಯ ಸಚಿವ ಜಾಫರ್ ಮಿರ್ಜಾ ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ನಾವು ಕೊರೋನಾ ವೈರಸ್ ಸಂಬಂಧ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ನರೇಂದ್ರ ಮೋದಿ-ಜಾಫರ್ ಮಿರ್ಜಾ
ನರೇಂದ್ರ ಮೋದಿ-ಜಾಫರ್ ಮಿರ್ಜಾ

ನವದೆಹಲಿ: ಕೊರೋನಾ ವಿರುದ್ಧ ತುರ್ತು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಾರ್ಕ್ ದೇಶಗಳ ನಡುವಿನ ವಿಡಿಯೋ ಕಾನ್ಪರೆನ್ಸ್ ನಲ್ಲಿ ಪಾಕಿಸ್ತಾನದ ಆರೋಗ್ಯ ಸಚಿವ ಜಾಫರ್ ಮಿರ್ಜಾ ಭಾರತ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿ ನಾವು ಕೊರೋನಾ ವೈರಸ್ ಸಂಬಂಧ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. 

ಸಾರ್ಕ್ ದೇಶಗಳ ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಾಫರ್ ಮಿರ್ಜಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಕೊರೋನಾ ವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು ಅಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಲ್ಲಿನ ನಿರ್ಬಂಧವನ್ನು ತೆಗೆದರೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ. 

ಈ ಹೇಳಿಕೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸುವ ಮೂಲಕ ತಿರುಗೇಟು ನೀಡಿದ್ದಾರೆ. ನಮ್ಮ ನೆರೆ ರಾಷ್ಟ್ರಗಳ ಜೊತೆ ನಾವು ಕೋವಿದ್-19 ವಿರುದ್ಧದ ಹೋರಾಟದಲ್ಲಿ ನಮ್ಮ ಕೈಲಾದಷ್ಟು ನೆರವಿನ ಹಸ್ತವನ್ನು ಚಾಚುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಡಿಯೋ ಕಾನ್ಫರೆನ್ಸ್ ನೇತೃತ್ವ ವಹಿಸಿದ್ದರಿಂದ ಪಾಕಿಸ್ತಾನದ ಈ ಹೇಳಿಕೆಗೆ ಯಾವುದೇ ಪ್ರತ್ಯುತ್ತರ ನೀಡದೆ ಸುಮ್ಮನಿದ್ದರು. 

ಸಾರ್ಕ್ ರಾಷ್ಟ್ರಗಳಾದ ಆಫ್ಘಾನಿಸ್ತಾನದಿಂದ ಅಧ್ಯಕ್ಷ ಆಶ್ರಫ್ ಗನಿ, ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೊಲಿಹ್, ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ, ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ, ಭೂತಾನ್ ಪ್ರಧಾನಿ ಲೋಟೇ ತ್ಸೆರಿಂಗ್, ಬಾಂಗ್ಲಾದೇಶ ಪ್ರಧಾನಿ ಶೇಕ್ ಹಸೀನಾ ಮತ್ತು ಪಾಕಿಸ್ತಾನದಿಂದ ಆರೋಗ್ಯ ಸಚಿವ ಜಾಫರ್ ಮಿರ್ಜಾ ವಿಡಿಯೋ ಕಾನ್ಪರೆನ್ಸ್ ನಲ್ಲಿ ಮಾತನಾಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com