'ಬಂಡಾಯ ಕಾಂಗ್ರೆಸ್ ಶಾಸಕರನ್ನು ಬಿಟ್ಟುಬಿಡಿ, ನಾಳೆ ಕಲಾಪದಲ್ಲಿ ಅವರು ಭಾಗವಹಿಸಲಿ':ಅಮಿತ್ ಶಾಗೆ ಪತ್ರ ಬರೆದ ಕಮಲ್ ನಾಥ್ 

ಬೆಂಗಳೂರಿನಲ್ಲಿ ಬಿಜೆಪಿ ವಶದಲ್ಲಿಟ್ಟುಕೊಂಡಿರುವ 22 ಮಂದಿ ಕಾಂಗ್ರೆಸ್ ಶಾಸಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಪತ್ರ ಬರೆದಿದ್ದಾರೆ.
ಕಮಲ್ ನಾಥ್
ಕಮಲ್ ನಾಥ್

ಭೋಪಾಲ್:ಬೆಂಗಳೂರಿನಲ್ಲಿ ಬಿಜೆಪಿ ವಶದಲ್ಲಿಟ್ಟುಕೊಂಡಿರುವ 22 ಮಂದಿ ಕಾಂಗ್ರೆಸ್ ಶಾಸಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಪತ್ರ ಬರೆದಿದ್ದಾರೆ.


ಈ ಕುರಿತು ನಾಲ್ಕು ಪುಟಗಳ ಪತ್ರ ಬರೆದಿರುವ ಕಮಲ್ ನಾಥ್, ಬಿಜೆಪಿ ಈ ಶಾಸಕರನ್ನು ಬಂಧಿಸಿಟ್ಟುಕೊಂಡಿದೆ ಎಂದು ಆರೋಪಿಸಿದ್ದಾರೆ. ಕೇಂದ್ರ ಗೃಹ ಸಚಿವರಾಗಿ ನಿಮ್ಮ ಅಧಿಕಾರವನ್ನು ಬಳಸಿಕೊಂಡು 22 ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿನಿಂದ ಸುರಕ್ಷಿತವಾಗಿ ಬಿಡುಗಡೆ ಮಾಡಿ. ನಾಳೆಯಿಂದ ವಿಧಾನಸಭೆ ಅಧಿವೇಶನ ಆರಂಭವಾಗುತ್ತಿದ್ದು ಅವರು ಯಾವುದೇ ಭೀತಿ, ಒತ್ತಡಗಳಿಗೆ ಒಳಗಾಗದೆ ಸದನ ಕಲಾಪದಲ್ಲಿ ಭಾಗವಹಿಸಲು ಕಳುಹಿಸಿಕೊಡಬೇಕು ಎಂದು ಪತ್ರದಲ್ಲಿ ಹೇಳಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರು ಮಾಧ್ಯಮಕ್ಕೆ ತಿಳಿಸಿದ್ದಾರೆ.

22 ಶಾಸಕರನ್ನು ಬಿಟ್ಟರೆ ಸರ್ಕಾರ ಅವರಿಗೆ ಅತ್ಯುನ್ನತ ಭದ್ರತೆಯನ್ನು ನೀಡಲಿದೆ ಎಂದು ಕಮಲ್ ನಾಥ್ ಅಮಿತ್ ಶಾ ಅವರಿಗೆ ಭರವಸೆ ನೀಡಿದ್ದಾರೆ. 

ಜ್ಯೋತಿರಾದಿತ್ಯ ಸಿಂಧಿಯಾ ಅವರು ಸೇರಿದಂತೆ ಅವರ ಬೆಂಬಲಿತ 22 ಶಾಸಕರು ಕಾಂಗ್ರೆಸ್ ನ್ನು ತೊರೆದು ಬಿಜೆಪಿ ಸೇರಲು ಮುಂದಾಗಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಕಮಲ್ ನಾಥ್ ಸರ್ಕಾರದ ಸದಸ್ಯಬಲ ಅಲ್ಪಮತಕ್ಕೆ ಕುಸಿದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com