ಕೊರೋನಾ ವೈರಸ್ ಎಫೆಕ್ಟ್: ಕರ್ನಾಟಕವಷ್ಟೇ ಅಲ್ಲ, ದೇಶದ 20 ರಾಜ್ಯಗಳೂ ಕೂಡ ಬಂದ್!

ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್'ಗೆ ಈ ಜಗತ್ತೇ ಬೆಚ್ಚಿಬೀಳುತ್ತಿದ್ದು, ಮಾರಕ ವೈರಸ್'ಗೆ ನಿಯಂತ್ರಣದ ನಿಟ್ಟಿನಲ್ಲಿ ಇದೀಗ ಇಡೀ ಭಾರತ ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದೆ. ದೇಶದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಸೇರಿದಂತೆ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ವಿಶ್ವದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ವೈರಸ್'ಗೆ ಈ ಜಗತ್ತೇ ಬೆಚ್ಚಿಬೀಳುತ್ತಿದ್ದು, ಮಾರಕ ವೈರಸ್'ಗೆ ನಿಯಂತ್ರಣದ ನಿಟ್ಟಿನಲ್ಲಿ ಇದೀಗ ಇಡೀ ಭಾರತ ತನ್ನನ್ನು ತಾನು ಪ್ರತ್ಯೇಕಿಸಿಕೊಂಡಿದೆ. ದೇಶದ 28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಪೈಕಿ ಕರ್ನಾಟಕ ಸೇರಿದಂತೆ ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸೋಂಕು ತಡೆಯುವ ನಿಟ್ಟಿನಲ್ಲಿ ಕೂಡಲೇ ಜಾರಿಗೆ ಬರುವಂತೆ ಹಲವು ಕಠಿಣ ಕ್ರಮಗಳನ್ನು ಘೋಷಣೆ ಮಾಡಿದೆ. ಬಂದ್ ವಾತಾವರಣ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರತೊಡಗಿದೆ. 

ದೇಶವ್ಯಾಪ್ತಿ ಬಂದ್, ಮುಷ್ಕರ ಹೊರತು ಪಡಿಸಿ ಇತರೆ ಯಾವುದೇ ಸಂದರ್ಭದಲ್ಲಿ ಪ್ರಮುಖವಾಗಿ ಆರೋಗ್ಯ ವಿಚಾರವಾಗಿ ದೇಶದಲ್ಲಿ ಇಂತಹ ವಾತಾರವಣ ನಿರ್ಮಾಣವಾಗಿರುವುದು ಇತ್ತೀಚಿನ ದಶಕಗಳಲ್ಲಿ ಇದೇ ಮೊದಲು ಎಂದು ಹೇಳಲಾಗುತ್ತಿದೆ. 

ದೇಶದ ರಾಜ್ಯಗಳಾದ ಕರ್ನಾಟಕ, ದೆಹಲಿ, ಹರಿಯಾಣ, ತಮಿಳುನಾಡು, ಉತ್ತರಪ್ರದೇಶ, ಹರಿಯಾಣ, ಬಿಹಾರ, ಪಶ್ಚಿಮ ಬಂಗಾಳ, ಗೋವಾ, ರಾಜಸ್ಥಾನ, ಮಹಾರಾಷ್ಟ್ರ, ಛತ್ತೀಸ್ಗಢ, ಪಂಜಾಬ್, ಜಮ್ಮು ಮತ್ತು ಕಾಶಅಮೀರ, ತೆಲಂಗಾಣ, ಹಿಮಾಚಲ ಪ್ರದೇಶ, ಕೇರಳ, ಮಿಡೋರಾಂ, ಜಾರ್ಖಂಡ್, ಮಧ್ಯಪ್ರದೇಶ ರಾಜ್ಯಗಳಲ್ಲಿ ಬಂದ್ ವಾತಾವರಣ ನಿರ್ಮಾಣವಾಗಿದೆ. 

ದೇಶದಲ್ಲಿ 100 ಜನರಿಗೆ ಕೊರೋನಾ ಸೋಂಕು ತಗುಲಿ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಹುತೇಕ ರಾಜ್ಯಗಳು ತಕ್ಷಣದಿಂದಲೇ ಜಾರಿಗೆ ಬರುವಂತೆ ಹಲವು ಕ್ರಮಗಳನ್ನು ಘೋಷಣೆ ಮಾಡಿವೆ. ಈ ಪೈಕಿ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ಉಳಿದೆಲ್ಲಾ ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳನ್ನು ಮಾರ್ಚ್ ಅಂತ್ಯದವರೆಗೂ ಮುಂದೂಡಲಾಗಿದೆ. ಜೊತೆಗೆ 1-7ನೇ ತರಗತಿವರೆಗಿನ ಪರೀಕ್ಷೆಗಲನ್ನು ಮುಂದೂಡುವ ಮೂಲಕ, ಮಕ್ಕಳನ್ನು ಸೋಂಕಿನಿಂದ ರಕ್ಷಿಸುವ ಯತ್ನವನ್ನು ಸರ್ಕಾರಗಳು ಮಾಡಿವೆ. 

ಇನ್ನು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾರ್ವಜನಿಕ ಸಮಾರಂಭ, ವಿವಾಹ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮಗಳ ಮೇಲೆ ಪರೋಕ್ಷ ನಿರ್ಬಂಧ ಹೇರಲಾಗಿದೆ. ಜೊತೆಗೆ ಹಲವು ರಾಜ್ಯಗಳಲ್ಲಿ ಮಾಲ್, ಬಾರ್, ಜಿಮ್, ಪಬ್, ಸಿನೆಮಾ ಹಾಲ್ ಗಳನ್ನು ಮಾರ್ಚ್ ಅಂತ್ಯದವರೆಗೂ ಮುಚ್ಚಲು ಆಯಾ ರಾಜ್ಯ ಸರ್ಕಾರಗಳು ಆದೇಶಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com