ಮಧ್ಯಪ್ರದೇಶ ಬಿಕ್ಕಟ್ಟು: ಬಂಡಾಯ ಶಾಸಕರೊಂದಿಗೆ ಸಂಪರ್ಕ ಬಯಸಿ ಸುಪ್ರೀಂ ಮೊರೆ ಹೋದ ಕಾಂಗ್ರೆಸ್ 

ಬಂಡಾಯ ಶಾಸಕರೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಲು ಕೇಂದ್ರಸರ್ಕಾರ ಹಾಗೂ ಬಿಜೆಪಿ ಆಡಳಿತದ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಧ್ಯ ಪ್ರದೇಶ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಮಧ್ಯಪ್ರದೇಶ ಕಾಂಗ್ರೆಸ್ ಬಂಡಾಯ ಶಾಸಕರು
ಮಧ್ಯಪ್ರದೇಶ ಕಾಂಗ್ರೆಸ್ ಬಂಡಾಯ ಶಾಸಕರು

ನವದೆಹಲಿ: ಬಂಡಾಯ ಶಾಸಕರೊಂದಿಗೆ ಸಂವಹನ ನಡೆಸಲು ಅವಕಾಶ ಮಾಡಿಕೊಡಲು ಕೇಂದ್ರಸರ್ಕಾರ ಹಾಗೂ ಬಿಜೆಪಿ ಆಡಳಿತದ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಮಧ್ಯ ಪ್ರದೇಶ ಕಾಂಗ್ರೆಸ್ ಪಕ್ಷ ಸುಪ್ರೀಂಕೋರ್ಟ್ ಮೊರೆ ಹೋಗಿದೆ.

ರಾಜ್ಯಸಭೆಯಲ್ಲಿ ಕೂಡಲೇ ವಿಶ್ವಾಸಮತ ಯಾಚನೆಗೆ ಒತ್ತಾಯಿಸಿ ಬಿಜೆಪಿ ಹಿರಿಯ ಮುಖಂಡ ಶಿವರಾಜ್ ಸಿಂಗ್ ಚೌಹ್ಹಾಣ್ ಸಲ್ಲಿಸಿದ್ದ ಅರ್ಜಿಗೆ ಬುಧವಾರ ಪ್ರತಿಕ್ರಿಯಿಸುವಂತೆ ಸುಪೀಂಕೋರ್ಟ್ ಕಮಲ್ ನಾಥ್ ಸರ್ಕಾರಕ್ಕೆ ಬೆಳಗ್ಗೆ ಸೂಚಿಸಿತ್ತು.

ಕೇಂದ್ರ, ಕರ್ನಾಟಕ ಸರ್ಕಾರ ಮತ್ತು ಬಿಜೆಪಿಯ ರಾಜ್ಯ ಘಟಕವು ಬಂಡಾಯ ಶಾಸಕರನ್ನು ಬೆಂಗಳೂರಿನಲ್ಲಿ ಅಕ್ರಮವಾಗಿ ಬಂಧಿಸಿರುವ ಚಟುವಟಿಕೆಗಳನ್ನು ಕಾನೂನುಬಾಹಿರ ಎಂದು ಘೋಷಿಸುವಂತೆ ರಾಜ್ಯ ಕಾಂಗ್ರೆಸ್ ಸುಪ್ರೀಂಕೋರ್ಟ್ ನಲ್ಲಿ  ಸಲ್ಲಿಸಿರುವ ಅರ್ಜಿಯಲ್ಲಿ  ಒತ್ತಾಯಿಸಿತ್ತು. ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಬಂಡಾಯ ಶಾಸಕರಿಗೆ ನಿರ್ದೇಶನ ನೀಡುವಂತೆ ಕೋರಲಾಗಿತ್ತು. 

ರಾಜ್ಯಪಾಲರು ವಿಶ್ವಾಸಮತಯಾಚನೆಗೆ ಗಡುವು ನೀಡಿರುವುದು ಕಾನೂನು ಬಾಹಿರ, ಅಸಂವಿಧಾನಿವಾಗಿದ್ದು, ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳ ಸಮ್ಮುಖದಲ್ಲಿ  ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಯಬೇಕೆಂದು ಕಾಂಗ್ರೆಸ್ ಮುಖ್ಯ ಸಚೇತಕ ಗೋವಿಂದ್ ಸಿಂಗ್ ಅರ್ಜಿಯಲ್ಲಿ ಕೋರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com