ಕೊರೋನಾ ವೈರಸ್: ಪ್ರತ್ಯೇಕ ಕೊಠಡಿಗಳಲ್ಲಿ ಟಿವಿ, ಇಂಟರ್ನೆಟ್ ಸೌಲಭ್ಯ ಕಲ್ಪಿಸಲಿರುವ 'ಮಹಾ' ಸರ್ಕಾರ 

ಕೊರೋನಾ ವೈರಸ್ ಕಂಡು ಬಂದ ಸೋಂಕಿತರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪ್ರತ್ಯೇಕ ಕೊಠಡಿಗಳಲ್ಲಿ ಟಿವಿ ಹಾಗೂ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 
ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆ

ಮುಂಬೈ: ಕೊರೋನಾ ವೈರಸ್ ಕಂಡು ಬಂದ ಸೋಂಕಿತರನ್ನು ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಪ್ರತ್ಯೇಕ ಕೊಠಡಿಗಳಲ್ಲಿ ಟಿವಿ ಹಾಗೂ ಇಂಟರ್ನೆಟ್ ವ್ಯವಸ್ಥೆ ಕಲ್ಪಿಸಲು ಮಹಾರಾಷ್ಟ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು, ಸೋಂಕಿತರನ್ನು ಇರಿಸಲಾಗಿರವ ಪ್ರತ್ಯೇಕ ಕೊಠಡಿಯಲ್ಲಿ ಟಿವಿ, ಆಹಾರ, ಇಂಟರ್ನೆಟ್ ಸೇವ, ಕೇರಂ ಬೋರ್ಡ್ಸ್, ಹಾಗೂ ಇತರೆ ವ್ಯವಸ್ಥೆಗಳನ್ನು ಕಲ್ಪಿಸಲು ನಿರ್ಧಾರ ವ್ಯವಸ್ಥೆಗಳನ್ನು ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. 

ವೈರಸ್ ಕುರಿತು ಜನರು ಭೀತಿಗೊಳಗಾಗಬಾರದು. ಕೋರೋನಾ ಎದುರಿಸಲು ನಾವೆಲ್ಲರೂ ಒಗ್ಗೂಡಿ ಕೆಲಸ ಮಾಡಬೇಕ ಎಂದು ತಿಳಿಸಿದ್ದಾರೆ. ಅಲ್ಲದೆ, ಕೊರೋನಾ ವೈರಸ್ ಕುರಿತು ಜಾಗೃತಿ ಮೂಡಿಸಲು ಸಹಕಾರ ನೀಡಬೇಕೆಂದು ಹೋರ್ಡಿಂಗ್ಸ್ ಮಾಲೀಕರ ಬಳಿ ಮನವಿ ಮಾಡಿಕೊಂಡಿದ್ದಾರೆ, ರೈಲ್ವೇ ನಿಲ್ದಾಣಗಳು, ಬಸ್ ಗಳ ಮೇಲೆ ಕೊರೋನಾ ಕುರಿತು ಸಂದೇಶಗಳನ್ನು ಬರೆಯಲು ನಿರ್ಧರಿಸಲಾಗಿದೆ. ಈ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈ ನಡುವೆ ನಾಗರೀಕ ಆಸ್ಪತ್ರೆಗಳಲ್ಲಿ ಕೊರೋನಾ ವೈರಸ್'ಗೆ ಚಿಕಿತ್ಸೆ ಪಡೆಯುತ್ತಿದ್ದ 7 ಮಂದಿ ನಾಪತ್ತೆಯಾಗಿದ್ದು, ಇವರನ್ನು ಮನೆಯೊಳಗೆ ಸೇರಿಸಿಕೊಳ್ಳಲು ಕುಟುಂಬ ಸದಸ್ಯರು ತಿರಸ್ಕರಿಸುತ್ತಿದ್ದಾರೆ. ಮೊದಲು ಪರೀಕ್ಷೆಗಳನ್ನು ಪೂರ್ಣಗೊಳಿಸಿಕೊಂಡು, ಸಂಪೂರ್ಣವಾಗಿ ಗುಣಮುಖರಾದ ಬಳಿಕವಷ್ಟೇ ಮನೆಗಳಿಗೆ ಬರುವಂತೆ ತಿಳಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com