ಮಧ್ಯ ಪ್ರದೇಶ ಬಿಕ್ಕಟ್ಟು: ಬಂಡಾಯ ಶಾಸಕರ ಹಾಜರುಪಡಿಸುವ ಪ್ರಸ್ತಾಪ ತಿರಸ್ಕರಿಸಿದ ಸುಪ್ರೀಂ, ವಿಚಾರಣೆ ನಾಳೆಗೆ ಮುಂದೂಡಿಕೆ

ಮಧ್ಯ ಪ್ರದೇಶದ 16 ಬಂಡಾಯ ಕಾಂಗ್ರೆಸ್ ಶಾಸಕರನ್ನು ಕೋರ್ಟ್ ಗೆ ಹಾಜರುಪಡಿಸಬೇಕು ಎಂಬ ಕಾಂಗ್ರೆಸ್ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಅವರು ವಿಧಾನಸಭೆಗೆ ಹೋಗಬಹುದು...
ಮಧ್ಯಪ್ರದೇಶ ಕಾಂಗ್ರೆಸ್ ಬಂಡಾಯ ಶಾಸಕರು
ಮಧ್ಯಪ್ರದೇಶ ಕಾಂಗ್ರೆಸ್ ಬಂಡಾಯ ಶಾಸಕರು

ನವದೆಹಲಿ: ಮಧ್ಯ ಪ್ರದೇಶದ 16 ಬಂಡಾಯ ಕಾಂಗ್ರೆಸ್ ಶಾಸಕರನ್ನು ಕೋರ್ಟ್ ಗೆ ಹಾಜರುಪಡಿಸಬೇಕು ಎಂಬ ಕಾಂಗ್ರೆಸ್ ಮನವಿಯನ್ನು ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟವಾಗಿ ತಿರಸ್ಕರಿಸಿದ್ದು, ಅವರು ವಿಧಾನಸಭೆಗೆ ಹೋಗಬಹುದು ಅಥವಾ ಹೋಗದೆ ಇರಬಹುಬಹುದು. ಆದರೆ ಅವರನ್ನು ಸೆರೆಯಲ್ಲಿಡಲಾಗುವುದಿಲ್ಲ ಎಂದು ಹೇಳಿದೆ.

ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌಹಾಣ್ ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ, ನಾವು ಅವರಿಗೆ ನಿರ್ದೇಶನ ಕೊಡಲು ಬರುವುದಿಲ್ಲ. ಈ 16 ಶಾಸಕರು ಮುಕ್ತವಾಗಿ ವಿಧಾನಸಭೆಗೆ ಬರಬಹುದು. ಅದು ಅವರ ಆಯ್ಕೆಯಾಗಿದೆ ಎಂದು ಹೇಳಿದೆ.

ಬಂಡಾಯ ಕಾಂಗ್ರೆಸ್ ಶಾಸಕರನ್ನು ಕೋರ್ಟ್ ಗೆ ಹಾಜರುಪಡಿಸಲು ನಿರಾಕರಿಸಿದ ಕೋರ್ಟ್, 16 ಶಾಸಕರನ್ನು ಭೇಟಿ ಮಾಡುವುದಕ್ಕಾಗಿ ತಮ್ಮ ರಿಜಿಸ್ಟ್ರಾರ್ ಜನರಲ್ ಅವರನ್ನು ಕಳುಹಿಸುವುದು ಅಪ್ರಸ್ತುತ ಎಂದು ಹೇಳಿದೆ.

ಶಿವರಾಜ್ ಸಿಂಗ್ ಚೌಹಾಣ್ ಪರ ವಾದ ಮಂಡಿಸಿದ ಮುಕುಲ್ ರೋಹ್ಟಗಿ ಅವರು, ಎಲ್ಲಾ 16 ಬಂಡಾಯ ಶಾಸಕರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿ ಮತ್ತು ಕರ್ನಾಟಕ ಹೈಕೋರ್ಟ್ ರಿಜಿಸ್ಟ್ರರ್ ಜನರಲ್ ಅವರು ಹೋಗಿ ಶಾಸಕರನ್ನು ಭೇಟಿ ಮಾಡಬಹುದು ಎಂದು ಹೇಳಿದ್ದರು. ರೋಹ್ಟಗಿ ವಾದವನ್ನು ಕೋರ್ಟ್ ಸ್ಪಷ್ಟವಾಗಿ ತಳ್ಳಿಹಾಕಿದೆ.

ಪ್ರಕರಣದ ವಿಚಾರಣೆಯನ್ನು ಕೋರ್ಟ್ ನಾಳೆ ಬೆಳಗ್ಗೆ 10.30ಕ್ಕೆ ಮುಂದೂಡಿದೆ.

ಕೇಂದ್ರ, ಕರ್ನಾಟಕ ಸರ್ಕಾರ ಮತ್ತು ಬಿಜೆಪಿಯ ರಾಜ್ಯ ಘಟಕವು ಬಂಡಾಯ ಶಾಸಕರನ್ನು ಬೆಂಗಳೂರಿನಲ್ಲಿ ಅಕ್ರಮವಾಗಿ ಬಂಧಿಸಿದ್ದು, ಇದು ಕಾನೂನುಬಾಹಿರ ಎಂದು ಘೋಷಿಸುವಂತೆ ಮತ್ತು ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಬಂಡಾಯ ಶಾಸಕರಿಗೆ ನಿರ್ದೇಶನ ನೀಡುವಂತೆ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com