ಕೊರೋನಾ ವೈರಸ್: ಭಾರತದಲ್ಲಿ ನಾಲ್ಕನೇ ಬಲಿ, ಪಂಜಾಬ್ ನಲ್ಲಿ ವೃದ್ಧ ಸಾವು!

ಭಾರತದಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಪಂಜಾಬ್ ನಲ್ಲಿ ಸುಮಾರು 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾದಂತಾಗಿದೆ.
ಕೊರೋನಾ ವೈರಸ್ ತಡೆಗೆ ಕ್ರಮ:  ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ 3 ಪಾಳಿಯಲ್ಲಿ ಕೆಲಸ ಮಾಡಲು ಸೂಚನೆ!
ಕೊರೋನಾ ವೈರಸ್ ತಡೆಗೆ ಕ್ರಮ:  ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ 3 ಪಾಳಿಯಲ್ಲಿ ಕೆಲಸ ಮಾಡಲು ಸೂಚನೆ!
Updated on: 

ನವದೆಹಲಿ: ಭಾರತದಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಪಂಜಾಬ್ ನಲ್ಲಿ ಸುಮಾರು 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾದಂತಾಗಿದೆ.

ಪಂಜಾಬ್ ನಲ್ಲಿ ಮೊದಲ ಸಾವು
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಅನ್ವಯ ದೇಶದಲ್ಲಿ ಈ ವರೆಗೂ 167 ಮಂದಿ ಸೋಂಕಿಗೆ ತುತ್ತಾಗಿದ್ದು, ಪಂಜಾಬ್ ನಲ್ಲಿ ಸೋಂಕಿತರ ಸಂಖ್ಯೆ 2ಕ್ಕೇರಿದ್ದು, ಅಂತೆಯೇ ಮೊದಲ ಸಾವು ಸಂಭವಿಸಿದೆ. ಪಂಜಾಬ್​ನಲ್ಲಿ ಕೋವಿಡ್​-19 ಸೋಂಕಿತ ವ್ಯಕ್ತಿ ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡೀಗಢದಲ್ಲೂ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕೆಲ ಗಂಟೆಗಳ ಹಿಂದಷ್ಟೇ ಪಂಜಾಬ್​ ಸರ್ಕಾರ ನಿಷೇಧಿಸಿತ್ತು. 

ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕೊರೋನಾ ಶಂಕಿತರನ್ನು ಆಸ್ಪತ್ರೆಯಲ್ಲಿರಿಸಿ ನಿಗಾ ವಹಿಸಲು ಸಾಧ್ಯವಾಗದ ಕಾರಣ ಅವರನ್ನು ಮನೆಯಲ್ಲೇ ಇರಿಸಿ, 14 ದಿನಗಳ ಕಾಲ ಪ್ರತ್ಯೇಕವಾಗಿರಲು ಸೂಚಿಸಲಾಗಿದೆ. ಮನೆಯಲ್ಲೇ ಸ್ವನಿರ್ಬಂಧಕ್ಕೆ ಆದೇಶಿಸಲಾಗಿರುವ ಕೊರೋನಾ ಶಂಕಿತರ ಕೈ ಮೇಲೆ ಕ್ವಾರಂಟೈನ್ ಸ್ಟಾಂಪ್ ಹಾಕಲು ಸರ್ಕಾರ ಆದೇಶ ಹೊರಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com