ಕೊರೊನಾ: ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಸಭೆ- ಸೋಂಕಿತರ ಸಂಖ್ಯೆ 223 ಕ್ಕೆ ಏರಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದರು. 
ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಸಭೆ
ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್ ಸಭೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದರು. 

ಪ್ರಮುಖವಾಗಿ ಕೊರೊನಾ ವೈರಸ್ ನಿಗ್ರಹಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಮೋದಿ ಚರ್ಚಿಸಿದರು. ಮಹಾರಾಷ್ಟ್ರ, ತೆಲಂಗಾಣ, ಕೇರಳ, ದೆಹಲಿ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದರು ಎಂದು ವರದಿಯಾಗಿದೆ.

ಈ ರಾಜ್ಯಗಳ ಆರೋಗ್ಯ ಸಚಿವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು ಎಂದು ವರದಿಯಾಗಿದೆ. ರಾಜ್ಯಗಳಲ್ಲಿನ ಕೊರೊನಾ ವೈರಸ್ ಪರಿಸ್ಥಿತಿ ಹಾಗೂ ಸೋಂಕು ಹಬ್ಬುವುದನ್ನು ತಡೆಗಟ್ಟಲು ಆಯಾ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಪ್ರಧಾನಿ ಮೋದಿ ಚರ್ಚಿಸಿದರು ಎಂದು ವರದಿಯಾಗಿದೆ.

ದೇಶಾದ್ಯಂತ ಜನರು ಕೊರೊನಾ ಬಗ್ಗೆ ಭಯಭೀತಿಗೊಳಗಾಗಿದ್ದಾರೆ. ಗುರುವಾರ ರಾತ್ರಿ ಪ್ರಧಾನಿ ಮೋದಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶುಕ್ರವಾರ ಹಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಸಭೆಯಲ್ಲಿ, ಕೊರೊನಾ ಪ್ರಪಂಚದಾದ್ಯಂತ ವೇಗವಾಗಿ ಹಬ್ಬುತ್ತಿದೆ. ಮಾರ್ಚ್ 1 ರಂದು ಅಮೆರಿಕಾದಲ್ಲಿ 25 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದವು ಇಂದು ಆ ಸಂಖ್ಯೆ 14,೦೦೦ ತಲುಪಿದೆ ಎಂದು ಪರಿಸ್ಥಿತಿಯ ತೀವ್ರತೆಯನ್ನು ವಿವರಿಸಿದ್ದಾರೆ.

ಬಿಸಿಲಿನ ತೀವ್ರತೆಗೆ ಕೊರೊನಾ ಹರಡುವುದಿಲ್ಲ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ. ಹೆಚ್ಚು ಬಿಸಿಲಿನ ತೀವ್ರತೆಯಿದ್ದರೂ ಸೌದಿಯಲ್ಲಿ ಕೊರೊನಾ ವೇಗವಾಗಿ ಹರಡುತ್ತಿದೆ ಎಂದು ಹೇಳಿದರು. ಬಿಸಿಲಿನ ತೀವ್ರತೆಗೆ ಕೊರೊನಾ ಹರಡುವುದಿಲ್ಲ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಅವರು ಹೇಳಿದರು. ಈ ವಿಡಿಯೋ ಕಾನ್ಫರೆನ್ಸ್ ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಸಿ. ಚಂದ್ರಶೇಖರ ರಾವ್, ರಾಜ್ಯದ ಆರೋಗ್ಯ ಸಚಿವ ಈಟೆಲ ರಾಜೇಂದರ್,. ಆಂಧ್ರಪ್ರದೇಶದಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಆರೋಗ್ಯ ಸಚಿವ ಆಳ್ಲ ನಾನಿ ಹಾಗೂ ಮುಖ್ಯಕಾರ್ಯದರ್ಶಿ ನೀಲಂ ಸಾಹ್ನಿ ಪಾಲ್ಗೊಂಡಿದ್ದರು. 

ದೇಶದಲ್ಲಿ ಇದುವರೆಗೆ 223 ಪ್ರಕರಣಗಳು ದಾಖಲಾಗಿವೆ. ತೆಲಂಗಾಣದಲ್ಲಿ 18 ಮತ್ತು ಆಂಧ್ರ ಪ್ರದೇಶದಲ್ಲಿ 3 ಪ್ರಕರಣಗಳು ದಾಖಲಾಗಿವೆ. ಕೊರೊನಾ ಹರಡುವುದನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಂಡಿವೆ. ಹಲವಾರು ರಾಜ್ಯಗಳಲ್ಲಿ ಶಾಲೆಗಳು, ಚಿತ್ರಮಂದಿರಗಳು ಮತ್ತು ಮಾಲ್‌ಗಳನ್ನು ಈಗಾಗಲೇ ಮುಚ್ಚಲಾಗಿದೆ. ವಿದೇಶದಿಂದ ಬಂದವರ ವಿಷಯದಲ್ಲಿ ಸರ್ಕಾರಗಳು ಹೆಚ್ಚು ಜಾಗರೂಕತೆ ವಹಿಸಿವೆ. ವಿದೇಶದಿಂದ ಬಂದವರಿಗೆ ಅವರ ಮನೆಗಳಲ್ಲಿ 14 ಕಾಲ ನಿರ್ಬಂಧ ವಿಧಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com