ಮಾಸ್ಕ್, ಸ್ಯಾನಿಟೈಸರ್ ಬೆಲೆ ನಿಗದಿ ಪಡಿಸಿ ಕೇಂದ್ರ ಸರ್ಕಾರ ಆದೇಶ: ಸಚಿವ ರಾಮ್ ವಿಲಾಸ್ ಪಾಸ್ವಾನ್

ಈಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಸ್ಕ್, ಸ್ಯಾನಿಟೈಸರ್ ಗಳಿಗೆ ದರ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಟ್ವೇಟ್ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಕೊರೊನಾ ವೈರಸ್ ಭೀತಿ ದೇಶದಲ್ಲಿ ಕಾಳ್ಗಿಚ್ಚಿನಂತೆ ಹಬ್ಬುತ್ತಿದಂತೆಯೇ ಕೇಂದ್ರ ಸರ್ಕಾರ ಮಾಸ್ಕ್, ಸ್ಯಾನಿಟೈಸರ್ ಗಳನ್ನು ಅತ್ಯಗತ್ಯ ವಸ್ತುಗಳ ಕಾಯ್ದೆ ವ್ಯಾಪ್ತಿಗೆ ಒಳಪಡಿಸಿತ್ತು, ಈಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಾಸ್ಕ್, ಸ್ಯಾನಿಟೈಸರ್ ಗಳಿಗೆ ದರ ನಿಗದಿಪಡಿಸಿ ಅಧಿಸೂಚನೆ ಹೊರಡಿಸಿದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ಟ್ವೇಟ್ ಮಾಡಿದ್ದಾರೆ.

ದೇಶದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿದ್ದಂತೆಯೇ ಮಾಸ್ಕ್, ಸ್ಯಾನಿಟೈಸರ್ ಗಳಿಗೆ ಬೇಡಿಕೆ ಹೆಚ್ಚುತ್ತಿದ್ದಂತೆಯೇ ಮೆಡಿಕಲ್ ಶಾಪ್ ಗಳು ದುಬಾರಿ ದರದಲ್ಲಿ ಮಾರಾಟದಲ್ಲಿ ತೊಡಗಿದ್ದವು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ, ಸರ್ಜಿಕಲ್ ಮಾಸ್ಕ್ ಒಂದಕ್ಕೆ 10 ರೂಪಾಯಿ, 200 ಮಿಲಿ ಲೀಟರ್ ಸ್ಯಾನಿಟೈಸರ್ ಬೆಲೆಯನ್ನ 100 ರೂ ನಿಗದಿ ಪಡಿಸಿ ಆದೇಶ ಹೊರಡಿಸಿದೆ ಎಂದು ಸಚಿವ ರಾಮ್ ವಿಲಾಸ್ ಪಾಸ್ವಾನ್ ಹೇಳಿದ್ದಾರೆ.

ಸೋಂಕು ಬಾರದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದೇಶದಲ್ಲಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಭಾರಿ ಪ್ರಮಾಣದಲ್ಲಿ ಹೆಚ್ಚಳಗೊಂಡಿದೆ. ಈ ಹಿನ್ನಲೆಯಲ್ಲಿ ದೇಶದ ಜನರ ಹಿತದೃಷ್ಟಿಯಿಂದ ಈ ವಸ್ತುಗಳಿಗೆ ದರ ನಿಗದಿ ಪಡಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು 2 ಪ್ಲೆ ಮಾಸ್ಕ್, 8 ರೂ, 3 ಪ್ಲೇ ಸರ್ಜಿಕಲ್ ಮಾಸ್ಕ್ 10 ರೂ. ಗಿಂತ ಹೆಚ್ಚು ಬೆಲೆ ವಿಧಿಸುವಂತಿಲ್ಲ 200 ಎಂಎಲ್ ಸ್ಯಾನಿಟೈಸರ್ ಗೆ ರೂ.100 ದರದಲ್ಲೇ ಮಾರಾಟ ಮಾಡುವಂತೆ ದರ ನಿಗದಿ ಪಡಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com