ಕೊರೋನಾ: ಅಸ್ಸಾಂನಲ್ಲಿ 4 ವರ್ಷದ ಮಗುವಲ್ಲಿ ದೃಢಪಟ್ಟ ವೈರಸ್?

ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇದೀಗ ಅಸ್ಸಾಂನಲ್ಲಿ 4 ವರ್ಷದ ಪುಟ್ಟ ಮಗುವಿನಲ್ಲಿಯೂ ವೈರಸ್ ದೃಢಪಟ್ಟಿರುವುದಾಗಿ ವರದಿಗಳು ತಿಳಿಸಿವೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಗುವಾಹಟಿ: ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇದೀಗ ಅಸ್ಸಾಂನಲ್ಲಿ 4 ವರ್ಷದ ಪುಟ್ಟ ಮಗುವಿನಲ್ಲಿಯೂ ವೈರಸ್ ದೃಢಪಟ್ಟಿರುವುದಾಗಿ ವರದಿಗಳು ತಿಳಿಸಿವೆ. 

ಪ್ರಾಥಮಿಕ ವೈದ್ಯಕೀಯ ಪರೀಕ್ಷೆಯಲ್ಲಿ ಮಗುವಿನಲ್ಲಿ ವೈರಸ್ ಇದೆ ಎಂದು ದೃಢಪಟ್ಟ ಹಿನ್ನೆಲೆಯಲ್ಲಿ ಇದೀಗ ವೈದ್ಯಕೀಯ ತಂಡ ಮರು ಪರೀಕ್ಷೆ ನಡೆಸಲು ನಿರ್ಧರಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಮಾಹಿತಿ ನೀಡಿರುವ ಅಸ್ಸಾಂ ರಾಜ್ಯ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಶರ್ಮಾ ಅವರು, ಕೊರೋನಾ ವೈರಸ್ ದೃಢಪಟ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಅಸ್ಸಾಂನಲ್ಲಿ ಈ ವರೆಗೂ ಯಾವುದೇ ವೈರಸ್ ದೃಢಪಟ್ಟಿಲ್ಲ. ಸಹೋದರಿ ಹಾಗೂ ತಾಯಿಯೊಂದಿಗೆ ರೈಲಿನಲ್ಲಿ ಮಗು ಮಾರ್ಚ್ 19 ರಂದು ಪ್ರಯಾಣ ಮಾಡಿ ಬಿಹಾರದಿಂದ ಬಂದಿತ್ತು. ಜೊರ್ಹಟ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಒಬ್ಬರಲ್ಲಿ ವೈರಸ್ ದೃಢಪಟ್ಟಿತ್ತು. ಇದೀಗ ಮತ್ತೊಮ್ಮೆ ಪರೀಕ್ಷೆ ನಡೆಸಲು ಪ್ರಯೋಗಾಲಯಕ್ಕೆ ರಕ್ತದ ಮಾದರಿ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. 

ಈಗಾಗಲೇ ಸೋಂಕು ಪೀಡಿತ ಕುಟುಂಬಸ್ಥರನ್ನು ಆಶಾ, ಎಎನ್ಎಮ್ ಮತ್ತು ಎಂಪಿಡಬ್ಲ್ಯೂ ಕಾರ್ಯಕರ್ತರು ಭೇಟಿ ಮಾಡಿದ್ದು, ಕುಟುಂಬಸ್ಥರನ್ನು ಪರೀಕ್ಷೆಗೊಳಪಡುವಂತೆ ಮನವೊಲಿಸಿದ್ದಾರೆ. ಪ್ರಸ್ತುತ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪ್ರತ್ಯೇಕ ಕೊಠಡಿಯಲ್ಲಿರಿಸಲಾಗಿದೆ. ಇದರಲ್ಲಿ ಆಶಾ ಕಾರ್ಯಕರ್ತರೂ ಕೂಡ ಇದ್ದಾರೆ. ಸೋಂಕಿತರ ಕುಟುಂಬಸ್ಥರನ್ನು ಆಸ್ಪತ್ರೆಯ ಪ್ರತ್ಯೇಕ ಕೊಠಡಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com