ಬಾಲ್ಕನಿ, ಕಿಟಕಿಗಳ ಮೂಲಕ ಹೊರಬಂದು ಚಪ್ಪಾಳೆ ತಟ್ಟಿ ಕೃತಜ್ಞತೆ ಅರ್ಪಿಸಿದ ಜನತೆ!

ಜನತೆ ಮನೆಯ ಬಾಲ್ಕನಿ, ಕಿಟಕಿಗಳ ಮೂಲಕ ಹೊರಬಂದು, ಸಾಂಕ್ರಾಮಿಕ ರೋಗದ ವಿರುದ್ಧದ ಸೇವೆಯಲ್ಲಿ ತೊಡಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ
ರಾಜನಾಥ್ ಸಿಂಗ್ ಮತ್ತಿತರರು
ರಾಜನಾಥ್ ಸಿಂಗ್ ಮತ್ತಿತರರು

ನವದೆಹಲಿ: ದೇಶಾದ್ಯಂತ ವ್ಯಾಪಿಸಿರುವ ಕೊರೋನಾ ಸೋಂಕು ತಡೆಯುವ ಉದ್ದೇಶದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಕರೆ ನೀಡಿದ್ದ ಜನತಾ ಕರ್ಪ್ಯೂಗೆ ಉತ್ತಮ  ಸ್ಪಂದನೆ ವ್ಯಕ್ತವಾಗಿದ್ದು, ಜನತೆ ಮನೆಯ ಬಾಲ್ಕನಿ, ಕಿಟಕಿಗಳ ಮೂಲಕ ಹೊರಬಂದು, ಸಾಂಕ್ರಾಮಿಕ ರೋಗದ ವಿರುದ್ಧದ ಸೇವೆಯಲ್ಲಿ ತೊಡಗಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ

ಕೋವಿಡ್ -19ನಿಂದ ದೇಶ ಮುಕ್ತವಾಗಲು ಜನತಾ ಕರ್ಫೂನಲ್ಲಿ ಪಾಲ್ಗೊಂಡ ಜನತೆ ಸಂಜೆ 5 ಗಂಟೆ 5 ನಿಮಿಷಕ್ಕೆ ಮನೆಯ ಬಾಲ್ಕನಿ, ಕಿಟಕಿಗಳ ಮೂಲಕ ಹೊರಬಂದು , ಸೇವೆಯಲ್ಲಿ ತೊಡಗಿರುವವವರಿಗೆ  ಧನ್ಯವಾದ ಸಲ್ಲಿಸುವಂತೆ ಪ್ರಧಾನಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಜನತೆ ಆದೇ ರೀತಿಯಲ್ಲಿ ಹೊರಬಂದು ಧನ್ಯವಾದ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ತಮ್ಮ ಕುಟುಂಬಸ್ಥರು ಜಾಗಟೆ, ಗಂಟೆ ಸದ್ದಿನೊಂದಿಗೆ ಕೃತಜ್ಞತೆ ಸಲ್ಲಿಸಿದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಾಗಟೆ ಬಾರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು.ಬೆಂಗಳೂರಿನ ಗಲ್ಲಿಗಲ್ಲಿಯಲ್ಲಿ ಗಂಟೆ, ಜಾಗತಿ ಸದ್ದು ಮೊಳಗಿದ್ದು,ಜನತೆ ಚಪ್ಪಾಳೆ ತಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ. 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ತಮ್ಮ ಕುಟುಂಬಸ್ಥರೊಂದಿಗೆ ಮನೆಯ ಬಾಲ್ಕನಿ ಮೇಲೆ ನಿಂತು ಕೊರೋನಾ ನಿಯಂತ್ರಣದಲ್ಲಿ ತೊಡಗಿರುವವರಿಗೆ ಕೃತಜ್ಞತೆ ಸಲ್ಲಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಜಾಗಟೆ ಬಾರಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಕೃತಜ್ಞತೆ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನು ಗುಜರಾತಿನ ತಮ್ಮ ಮನೆಯ ಮುಂಭಾಗ ತಟ್ಟೆ ಬಡಿಯುವ ಮೂಲಕ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ ಸಲ್ಲಿಸಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com