ಕೊರೋನಾಗೆ ದೇಶದಲ್ಲಿ ಮತ್ತೊಬ್ಬ ಬಲಿ: ಸಾವಿನ ಸಂಖ್ಯೆ 8ಕ್ಕೆ ಏರಿಕೆ, 400ಕ್ಕೇರಿದ ಸೋಂಕು ಪೀಡಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮುಂಬೈನಲ್ಲಿ ಮತ್ತೊಬ್ಬ ವ್ಯಕ್ತಿಯೊಬ್ಬರು ವೈರಸ್'ಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಸೋಂಕು ಪೀಡಿತರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮುಂಬೈನಲ್ಲಿ ಮತ್ತೊಬ್ಬ ವ್ಯಕ್ತಿಯೊಬ್ಬರು ವೈರಸ್'ಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಸೋಂಕು ಪೀಡಿತರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ. 

ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಿಲಿಪ್ಪೀನ್ಸ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಕೊರೋನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ಮಹಾರಾಷ್ಟ್ರದಲ್ಲಿ ಮತ್ತೆ ಹೊಸದಾಗಿ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ, ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. 

ನಿನ್ನೆಯಷ್ಟೇ ದೇಶದಾದ್ಯಂತ ಜನತಾ ಕರ್ಫ್ಯೂ ಆಚರಿಸಲಾಗಿದ್ದು, ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಆದರೂ ಈ ನಡುವಲ್ಲೂ ವೈರಸ್'ಗೆ ಭಾನುವಾರ ಮೂವರು ಬಲಿಯಾಗಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಕೇವಲ 24 ಗಂಟೆಗಳಲ್ಲಿ 15 ಮಂದಿಯಲ್ಲಿ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆತಂಕ ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ. 

ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಮಹಾರಾಷ್ಟ್ರದಲ್ಲಿ ಈ ವರೆಗೂ 89 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com