ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ ಕ್ರಮವಾಗಿ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧ

ಕೋವಿಡ್-19 ರಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ  ಕ್ರಮವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ನೀಡುವುದಕ್ಕೆ ಶಿಫಾರಸು ಮಾಡಲಾಗಿದೆ. 
ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧ
ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ’ಹೈಡ್ರಾಕ್ಸಿಕ್ಲೋರೋಕ್ವಿನ್’ ಔಷಧ

ನವದೆಹಲಿ: ಕೋವಿಡ್-19 ರಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಮುಂಜಾಗ್ರತಾ  ಕ್ರಮವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧ ನೀಡುವುದಕ್ಕೆ ಶಿಫಾರಸು ಮಾಡಲಾಗಿದೆ. 

ಐಸಿಎಂಆರ್ ಮಹಾ ನಿರ್ದೇಶಕ ಬಲರಾಂ ಭಾರ್ಗವ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್-19 ವೈರಾಣು ಸೋಂಕು ಹಬ್ಬದಂತೆ ತಡೆಗಟ್ಟಲು ಅಗತ್ಯವಾದ ಎಲ್ಲ ಮುನ್ನೆಚ್ಚರಿಕೆಗಳು ಮತ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
 ಕೋವಿಡ್-19 ಪೀಡಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಶಂಕಿತರ ಆರೋಗ್ಯದ ಮೇಲೆ ನಿಗಾ ಇಟ್ಟಿರುವ ಸಿಬ್ಬಂದಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧವನ್ನು  ಮುನ್ನೆಚ್ಚರಿಕಾ ಕ್ರಮವಾಗಿ ನೀಡುವುದಕ್ಕೆ ಶಿಫಾರಸು ಮಾಡಲಾಗಿದೆ ಎಂದು ಹೇಳಿದ್ದಾರೆ. 

ನ್ಯಾಷನಲ್ ಟಾಸ್ಕ್ ಫೋರ್ಸ್ ನಿಂದ ಶಿಫಾರಸು ಮಾಡಿರುವ ಔಷಧಕ್ಕೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಜಿಸಿಐ) ಅನುಮೋದನೆ ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com