ಭಾರತದಲ್ಲಿ ಕೊರೋನಾಗೆ ಒಂದೇ ದಿನ 3 ಬಲಿ, 10ಕ್ಕೇರಿದ ಸಾವಿನ ಸಂಖ್ಯೆ!

ಮಹಾಮಾರಿ ಕೊರೋನಾಗೆ ಭಾರತದಲ್ಲಿ ಒಂದೇ ದಿನ 3 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 10ಕ್ಕೇರಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಮಹಾಮಾರಿ ಕೊರೋನಾಗೆ ಭಾರತದಲ್ಲಿ ಒಂದೇ ದಿನ 3 ಮಂದಿ ಬಲಿಯಾಗಿದ್ದು ಸಾವಿನ ಸಂಖ್ಯೆ 10ಕ್ಕೇರಿದೆ. 

ಮಾರ್ಚ್ 15ರಂದು ಅಮೆರಿಕದಿಂದ ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 69 ವರ್ಷದ ವ್ಯಕ್ತಿಯೊಬ್ಬರಿಗೆ ಟಂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. 

ಇದೇ ವೇಳೆ ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದು ಸಾವಿನ ಸಂಖ್ಯೆ 10ಕ್ಕೇರಿದೆ. ಸದ್ಯ ಭಾರತದಲ್ಲಿ ಸೋಂಕಿತರ ಸಂಖ್ಯೆ 500 ದಾಟಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com