ಕೊರೋನಾ ವೈರಸ್: ವಿಶ್ವದೆಲ್ಲೆಡೆ ಮಹಾಮಾರಿಗೆ 15,000 ಮಂದಿ ಬಲಿ, ಸೋಂಕಿತರ ಸಂಖ್ಯೆ 3,78,000 ಏರಿಕೆ

ಜಾಗತಿಕವಾಗಿ ಕೊರೋನಾ ವೈರಸ್'ಗೆ ಬಲಿಯಾದವರ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 3,78,000 ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಾಸ್ಕೋ: ಜಾಗತಿಕವಾಗಿ ಕೊರೋನಾ ವೈರಸ್'ಗೆ ಬಲಿಯಾದವರ ಸಂಖ್ಯೆ 1,000ಕ್ಕೆ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 3,78,000 ಏರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ವೈರಸ್'ಗೆ ವಿಶ್ವದಾದ್ಯಂತ ಒಟ್ಟು 15,189 ಮಂದಿ ಸಾವನ್ನಪ್ಪಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. 

ಯೂರೋಪ್ ನಲ್ಲಿ 9,197 ಪ್ರಕರಣಗಳು ಪತ್ತೆಯಾಗಿದ್ದು, ವಿಶ್ವದ 50 ದೇಶಗಳಿನ 1 ಬಿಲಿಯನ್ ಜನರನ್ನು ಮನೆಗಳಲ್ಲಿಯೇ ಇರುವಂತೆ ಸೂಚನೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ನಡುವೆ ಇಟಲಿಯಲ್ಲಿ 5,476 ಮಂದಿ ಸಾವನ್ನಪ್ಪಿದ್ದು, ಚೀನಾದಲ್ಲಿ 3,270 ಹಾಗೂ ಸ್ಪೇನ್ ನಲ್ಲಿ 2,182 ಮಂದಿ ಸಾವನ್ನಪ್ಪಿದ್ದಾರೆ. ವಿಶ್ವದ ಹಲವು ರಾಷ್ಟ್ರಗಳು ಈಗಾಗಲೇ ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗಿದ್ದು, ಇನ್ನೂ ಕೆಲ ದೇಶಗಳಲ್ಲಿ ಜನರನ್ನು ಮನೆಯಲ್ಲಿಯೇ ಇರುವಂತೆ ಮನವಿ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. 

117 ಮಿಲಿಯನ್ ಜನಸಂಖ್ಯೆ ಇರುವ 10 ರಾಷ್ಟ್ರಗಳಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕರ್ಫ್ಯೂ ಹಾಕಲಾಗಿದ್ದು, ರಾತ್ರಿ ಸಂಚಾರಗಳನ್ನು ನಿಷೇಧಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com