ಕೊರೋನಾ ವೈರಸ್ ಭೀತಿ: ರಾಜ್ಯಸಭೆ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮುಂದೂಡಿಕೆ ಮಾಡಿದೆ. 
ಚುನಾವಣಾ ಆಯೋಗ
ಚುನಾವಣಾ ಆಯೋಗ

ನವದೆಹಲಿ: ಕೊರೋನಾ ವೈರೆಸ್ ಭೀತಿಯ ಹಿನ್ನೆಲೆಯಲ್ಲಿ ರಾಜ್ಯಸಭೆಗೆ ನಡೆಯಬೇಕಿದ್ದ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಮುಂದೂಡಿಕೆ ಮಾಡಿದೆ. 

ಈ ಕುರಿತಂತೆ ಮಂಗಳವಾರ ಸ್ಪಷ್ಟನೆ ನೀಡಿರುವ ಚುನಾವಣಾ ಆಯೋಗ, ಕೊರೋನಾ ಭೀತಿಯ ಹಿನ್ನಲೆಯಲ್ಲಿ ರಾಜ್ಯಸಭೆ ಚುನಾವಣೆಯನ್ನು ಮುಂದೂಡಲಾಗಿದೆ. ಇದೇ ಗರುವಾರ(ಮಾ.26)ರಂದು ರಾಜ್ಯಸಭೆಗೆ ಚುನಾವಣೆ ನಡೆಯಬೇಕಿತ್ತು. ಆದರೆ ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಮಾ.31ರ ಬಳಿಕ ಘೋಷಿಸಲಾಗುವುದು ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯಸಭೆ ಚುನಾವಣೆ ವೇಳೆ ಅಭ್ಯರ್ಥಿಗಳು, ಅಭ್ಯರ್ಥಿಗಳ ಏಜೆಂಟರು, ಚುನಾವಣಾ ಅಧಿಕಾರಿಗಳು ಹಾಗೂ ಶಾಸಕರು ಒಂದೆಡೆ ಸೇರಬೇಕಾಗುತ್ತದೆ. ಕೊರೊನಾ ವೈರಸ್ ಹರಡುತ್ತಿರುವ ಈ ಕಠಿಣ ಸಂದರ್ಭದಲ್ಲಿ ಎಲ್ಲರನ್ನೂ ಒಂದು ಕಡೆ ಸೇರಿಸುವುದು ಉಚಿತವಲ್ಲ. ಈ ಕಾರಣಕ್ಕೆ ಚುನಾವಣೆಯನ್ನೇ ಮುಂದೂಡಿರುವುದಾಗಿ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ದೇಶದ ವಿವಿಧ ರಾಜ್ಯಗಳ ಒಟ್ಟು 18 ರಾಜ್ಯಸಭಾ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com