ದೇಶದ ಜನತೆಗೆ 21 ದಿನ ದಿಗ್ಭಂದನ, ಭಾರತವೇ ಲಾಕ್ ಡೌನ್: ಪ್ರಧಾನಿ ಮೋದಿ ಖಡಕ್ ಆದೇಶ

ಜಗತ್ತನ್ನೇ ನಡುಗಿಸುತ್ತಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಕದಂಬಬಾಹು ಚಾಚುತ್ತಿದ್ದು ದೇಶದ ಜನತೆ 21 ದಿನಗಳ ಕಾಲ ಮನೆಯಲ್ಲೇ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.

Published: 24th March 2020 08:31 PM  |   Last Updated: 24th March 2020 08:58 PM   |  A+A-


Modi

ಪ್ರಧಾನಿ ಮೋದಿ

Posted By : Vishwanath S
Source : Online Desk

ನವದೆಹಲಿ: ಜಗತ್ತನ್ನೇ ನಡುಗಿಸುತ್ತಿರುವ ಕೊರೋನಾ ವೈರಸ್ ಭಾರತದಲ್ಲಿ ತನ್ನ ಕದಂಬಬಾಹು ಚಾಚುತ್ತಿದ್ದು ದೇಶದ ಜನತೆ 21 ದಿನಗಳ ಕಾಲ ಮನೆಯಲ್ಲೇ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮನವಿ ಮಾಡಿದ್ದಾರೆ.

ವಿಶ್ವದ ಬಹುತೇಕ ರಾಷ್ಟ್ರಗಳು ಕೊರೋನಾ ವೈರಸ್ ನಿಂದ ಬಾಧಿತವಾಗಿದೆ. ಇದರಿಂದ ದೇಶವನ್ನು ರಕ್ಷಿಸಿಕೊಳ್ಳಬೇಕೆಂದರೆ ದೇಶದ ಜನತೆ ಇನ್ನು 21 ದಿನಗಳ ಕಾಲ ರಸ್ತೆಗೆ ಇಳಿಯಬೇಡಿ ನಿಮ್ಮಲ್ಲಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ ಎಂದರು. 

ಕೊರೋನಾ ವೈರಸ್ ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ  ಸೂಚನೆಯನ್ನು ನಾಗರಿಕರು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ರಾತ್ರಿ ಮಧ್ಯರಾತ್ರಿ 12 ಗಂಟೆಯಿಂದ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದಾರೆ. ನಾವು ಈ ಕ್ಷಣದಿಂದ ಸಂಕಲ್ಪ ಮಾಡೋಣ. ನಮಗೆ ನಾವೇ ಲಕ್ಷ್ಮಣ ರೇಖೆಯನ್ನು ಹಾಕಿಕೊಂಡು ಮನೆಯಲ್ಲೇ ಇರಬೇಕು ಎಂದು ಹೇಳಿದರು. 

ಇಂದು ಮಧ್ಯರಾತ್ರಿಯಿಂದ ದೇಶಾದ್ಯಂತ 21 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಇದು ಜನತಾ ಕರ್ಪ್ಯೂಗಿಂತ ಕಠಿಣವಾಗಲಿದೆ. ಒಂದು ರೀತಿಯಲ್ಲಿ ಕರ್ಪ್ಯೂವೇ ಆಗಿರಲಿದೆ. ಇದು ದೇಶದ ಪ್ರತಿ ರಾಜ್ಯ, ಜಿಲ್ಲೆ, ಗ್ರಾಮಗಳಿಗೆ ಅನ್ವಯವಾಗಲಿದೆ ಎಂದರು.

ಈ 21 ದಿನಗಳ ಕಾಲ ನಾವು ಎಚ್ಚರಿಕೆಯಿಂದಿರುವ ಅಗತ್ಯವಿದೆ. ಇಲ್ಲದಿದ್ದಲ್ಲಿ ಭಾರತ 21 ವರ್ಷಗಳ ಕಾಲ ಹಿಂದಕ್ಕೆ ಹೋಗುತ್ತದೆ. ಜನರು ಮನೆಯಿಂದ ಹೊರಗೆ ಹೋಗುವ ಒಂದು ಹೆಜ್ಜೆ ಕೂಡ ಕೊರೋನಾದಂತಹ ಗಂಭೀರ ಸಮಸ್ಯೆಗೆ ಆಹ್ವಾನ ನೀಡಬಹುದು.

ಕೊರೋನಾ ವೈರಸ್ ವಿರುದ್ಧ ಹೋರಾಡಲು 15 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದರು. 

Stay up to date on all the latest ರಾಷ್ಟ್ರೀಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp