ಕೊರೋನಾ ವೈರಸ್: ಇಂದು ರಾತ್ರಿ 8 ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 475 ಕ್ಕೆ ಏರಿಕೆಯಾಗಿದ್ದು, ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಂಡಿದೆ. 
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 475 ಕ್ಕೆ ಏರಿಕೆಯಾಗಿದ್ದು, ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಈಗಾಗಲೇ ಕಠಿಣ ಕ್ರಮಗಳನ್ನು ಕೈಗೊಂಡಿದೆ. 

ಕೊರೋನಾ ಪ್ರಕರಣಗಳು ಬೆಳಕಿಗೆ ಬಂದ ಮೂರನೇ ವಾರ ನಮಗೆ ಅತ್ಯಂತ ಮಹತ್ವದ್ದಾಗಿದ್ದು,  ಘಾತೀಯ ಬೆಳವಣಿಗೆಯನ್ನು (exponential growth) ತಡೆಗಟ್ಟುವುದು ನಮ್ಮೆಲ್ಲರ ಮುಂದಿರುವ ಸವಾಲಾಗಿದೆ. ಮಾ.22 ರಂದು ಜನತಾ ಕರ್ಫ್ಯೂಗೆ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಕೊರೋನಾ ವೈರಸ್ ಕುರಿತು ಮಹತ್ವದ ಮಾಹಿತಿಗಳ ಬಗ್ಗೆ ದೇಶವನ್ನುದ್ದೇಶಿಸಿ ಮತ್ತೊಮ್ಮೆ ಮಾ.24 (ಮಂಗಳವಾರ) ರಂದು ರಾತ್ರಿ 8 ಕ್ಕೆ ಮಾತನಾಡಲಿದ್ದಾರೆ. 

ಈ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಕೋವಿಡ್-19 ಮಹಾಮಾರಿಯ ಕುರಿತ ಮಹತ್ವದ ಅಂಶಗಳ ಬಗ್ಗೆ  ರಾತ್ರಿ 8 ಕ್ಕೆ ದೇಶವನ್ನುದೇಶಿಸಿ ಮಾತನಾಡುವುದಾಗಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com